ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ ಆರ್. ಅಶೋಕ್, ಬೆಂಗಳೂರು ನಗರದ ನಿವಾಸಿ ಮತ್ತು ಪ್ರತಿಪಕ್ಷದ ನಾಯಕನಾಗಿ ಕಸದ ಟೆಂಡರ್ ಹಗರಣದ ಬಗ್ಗೆ ಧ್ವನಿ ಎತ್ತಿದ್ದೆನೆ. ಈ ಬಗ್ಗೆ ನಗರದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ಅಪಾರ್ಟ್‌ಮೆಂಟ್‌ಗಳ ನಿವಾಸಿಗಳ ಸಂಘ ಸೇರಿದಂತೆ ಎಲ್ಲ ಸಂಘ-ಸಂಸ್ಥೆಗಳು ರಾಷ್ಟ್ರಪತಿ, ರಾಜ್ಯಪಾಲರಿಗೆ ಮತ್ತು ಮುಖ್ಯಮಂತ್ರಿಗೆ ಪತ್ರ ಬರೆಯುವ ಮೂಲಕ ಚಳವಳಿ ಶುರು ಮಾಡಬೇಕೆಂದು ಒತ್ತಾಯಿಸಿದರು.