ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು ಗಲಾಟೆ ಮಾಡಿದ್ದರಿಂದ 7ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ..ಗಲಾಟೆ ಬಗ್ಗೆ ಗಸ್ತು ಕರ್ತವ್ಯಕ್ಕೆ ನೇಮಿಸಿದ್ದ ಪೇದೆಗಳು ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟಗಿರಿಕೋಟೆಯ ಅಯಾತ್ ಬಾಬ ಸರ್ಕಲ್ನಲ್ಲಿ ಗಸ್ತಿನಲ್ಲಿದ್ದಾಗ ಟನೆ ನಡೆದಿದೆ. .ಗಸ್ತಿನಲ್ಲಿದ್ದ ಪೋಲಿಸ್ ಪೇದೆಗಳು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.