ಡಿಕೆಶಿ ವಿರುದ್ಧದ ಪ್ರಕರಣ ರದ್ದು| High court

DK Shivakumar
DK Shivakumar
Published on
ಬೆಂಗಳೂರು: ನಾನು ಕರಸೇವಕ ಅಭಿಯಾನದಲ್ಲಿ ತೊಡಗಿದ್ದ ಬಿಜೆಪಿ ನಾಯಕರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್​ಗಳನ್ನು ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಂಡ ಆರೋಪದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿದೆ.
ನಗರದ ಹೈಗ್ರೌಂಡ್​ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಈ ಆದೇಶ ನೀಡಿದೆ. 
ವಿಚಾರಣೆ ವೇಳೆ ಅರ್ಜಿದಾರರ ಪರ ವಾದಿಸಿದ್ದ ವಕೀಲರು, ಬಿಜೆಪಿ ನಾಯಕರು ಲಂಚ ಪಡೆದಿದ್ದಾರೆ ಎಂದು ಆರೋಪಿಸುವ ಚಿತ್ರವನ್ನು ಕಾಂಗ್ರೆಸ್​ ಪಕ್ಷದ ಅಧಿಕೃತ ಖಾತೆಯಿಂದ ಟ್ವೀಟ್​ ಮಾಡಲಾಗಿದೆ. ಈ ಬಗ್ಗೆ ಬಿಜೆಪಿ ಕಾನೂನು ಟಕ ನೀಡಿದ್ದ ಖಾಸಗಿ ದೂರನ್ನು ಪರಿಗಣಿಸಿ ಪ್ರಕರಣ ದಾಖಲಿಸುವಂತೆ ವಿಚಾರಣಾಧೀನ ನ್ಯಾಯಲಯ ಆದೇಶಿಸಿದೆ. ಈ ಆದೇಶ ನೀಡುವಾಗ ಸುಪ್ರೀಂ ಕೋರ್ಟ್​ ನೀಡಿದ ಮಾರ್ಗಸೂಚಿಯನ್ನು ಪಾಲಿಸಲಾಗಿಲ್ಲ ಎಂದು ಆಕ್ಷೇಪಣೆಗಳನ್ನು ಸಲ್ಲಿಸಿದ್ದರು. 
ಡಿ.ಕೆ. ಶಿವಕುಮಾರ್​ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದರು ಎಂದು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ, ಪೋಸ್ಟ್​ ಅಪ್ಲೋಡ್​ ಮಾಡಿರುವುದು ಕಾಂಗ್ರೆಸ್​ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರು. ಸರಿಯಾಗಿ ಪ್ರಕ್ರಿಯೆ ಪಾಲಿಸದೆ ಪ್ರಕರಣ ದಾಖಲಿಸಲಾಗಿದೆ ಎಂದು ಅರ್ಜಿದಾರರ ವಕೀಲರು ವಾದಿಸಿದ್ದರು. ಇದನ್ನು ನ್ಯಾಯಪೀಠ ಪರಿಗಣಿಸಿದೆ. ವಿಸತ ಆದೇಶ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. 

ಏನಿದು ಪ್ರಕರಣ?:

ರಾಮ ಜನ್ಮಭೂಮಿ ವಿಚಾರವಾಗಿ ಮೂರು ದಶಕಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದ ಆರೋಪಿಯನ್ನು 2023ರ ಡಿಸೆಂಬರ್​ನಲ್ಲಿ ಪೊಲೀಸರು ಬಂಧಿಸಿದ್ದರು. ಇದನ್ನು ಖಂಡಿಸಿದ್ದ ಬಿಜೆಪಿ ನಾಯಕರು "ನಾನೂ ಕರಸೇವಕ, ನನ್ನನ್ನೂ ಬಂಧಿಸಿ' ಅಭಿಯಾನವನ್ನು ಆರಂಭಿಸಿದ್ದರು. ಇದನ್ನು ಟೀಕಿಸುವ ಉದ್ದೇಶದಿಂದ ಬಿಜೆಪಿ ನಾಯಕರ ಬಗ್ಗೆ ಲಂಚ ಪಡೆದ ಆರೋಪಗಳೊಂದಿಗೆ ನನ್ನನ್ನು ಬಂಧಿಸಿ ಎಂಬ ಒಕ್ಕಣೆಯ ಪೋಸ್ಟ್​ಗಳನ್ನು ಕೆಪಿಸಿಸಿಯ ಅಧಿಕೃತ ಖಾತೆಯಲ್ಲಿ ಹಂಚಲಾಗಿತ್ತು. ಇದರ ವಿರುದ್ಧ ಬಿಜೆಪಿ ಕಾನೂನು ಟಕ ಪ್ರಕರಣ ದಾಖಲಿಸಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net