ಈ ಸಂಬಂಧ ಅಂಚೆ ಇಲಾಖೆ ನೀಡಿದ ಲಿಖಿತ ದೂರಿನ ಆಧಾರದ ಮೇಲೆ 2026ರ ಮಾರ್ಚ್‌ನಲ್ಲಿ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಆರೋಪಿಗಳ ವಿರುದ್ಧ ಕ್ರಿಮಿನಲ್ ಸಂಚು, ವಂಚನೆ, ನಂಬಿಕೆ ದ್ರೋಹ, ದಾಖಲೆಗಳ ನಕಲಿ ಸೃಷ್ಟಿ ಸೇರಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್ ) ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆ-1988ರ ಅಡಿ ಪ್ರಕರಣ ದಾಖಲಿಸಲಾಗಿತ್ತು.