ಜಿಬಿಎ ವ್ಯಾಪ್ತಿಯಲ್ಲಿ 2400 ಚದರಡಿವರೆಗಿನ (+ಶೇ.20 ಹೆಚ್ಚುವರಿ ವ್ಯಾತ್ಯಾಸದ ಮಿತಿಯೊಂದಿಗೆ) ಅಳತೆಯ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ಜಿ+3 ಅಂತಸ್ತಿನ ವಸತಿ ಕಟ್ಟಡಗಳು ಅಥವಾ ಸ್ಟಿಲ್ಪ್ ಪಾರ್ಕಿಂಗ್+4 ಮಹಡಿಗಳನ್ನು ಹೊಂದಿರುವ ವಸತಿ ಕಟ್ಟಡಗಳು, ಪೂರ್ಣಗೊಂಡ ವಿದ್ಯುತ್ ಸಂಪರ್ಕಕ್ಕಾಗಿ ಮೇ 31ರ ಒಳಗಾಗಿ ಅರ್ಜಿ ಸಲ್ಲಿಸಿದ್ದಲ್ಲಿ ವಿದ್ಯುತ್ ಸಂಪರ್ಕ ಪಡೆಯಲು ಒಂದು ಬಾರಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ. ವಿದ್ಯುತ್ ಸಂಪರ್ಕ ಕೊಡುವ ಮೊದಲು ವಿದ್ಯುತ್ ಸರಬರಾಜು ಕಂಪನಿ ಅಧಿಕಾರಿಗಳು ಸ್ಥಳ ತನಿಖೆ ನಡೆಸಿ ಕಟ್ಟಡದ ಭಾವಚಿತ್ರ ತೆಗೆದು ದಾಖಲು ಮಾಡಬೇಕೆಂದು ಷರತ್ತು ವಿಧಿಸಲಾಗಿದೆ.