ಸ್ವಾತಂತ್ರ್ಯ ದಿನ ಅರ್ಥಪೂರ್ಣ ಆಚರಿಸಿ

ಕಲಬುರಗಿಯಲ್ಲಿ ಸ್ವಾತಂತ್ರೋತ್ಸವ ನಿಮಿತ್ತ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಇಕ್ರಮ್​ ಶರೀಫ್​, ಸಿಇಒ ರಾಹುಲ್​ ಸಂಕನೂರ, ಎಸ್​ಪಿ ಅಡ್ಡೂರು ಶ್ರೀನಿವಾಸುಲು, ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಎಸಿ ಸಾಹಿತ್ಯ ಆಲದಕಟ್ಟಿ ಇತರರಿದ್ದರು.
ಕಲಬುರಗಿಯಲ್ಲಿ ಸ್ವಾತಂತ್ರೋತ್ಸವ ನಿಮಿತ್ತ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಇಕ್ರಮ್​ ಶರೀಫ್​, ಸಿಇಒ ರಾಹುಲ್​ ಸಂಕನೂರ, ಎಸ್​ಪಿ ಅಡ್ಡೂರು ಶ್ರೀನಿವಾಸುಲು, ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಎಸಿ ಸಾಹಿತ್ಯ ಆಲದಕಟ್ಟಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಿಸಿ ಇಕ್ರಮ್​ ಶರೀಫ್​ ಸೂಚನೆ
  • ಕಲಬುರಗಿಯಲ್ಲಿ ಪೂರ್ವಸಿದ್ಧತಾ ಸಭೆ
ಕಲಬುರಗಿ: ಸ್ವಾತಂತ್ರ್ಯ ದಿನವನ್ನು ಆ.15ರಂದು ಜಿಲ್ಲಾದ್ಯಂತ ವಿಜೃಂಭಣೆ, ಅರ್ಥಪೂರ್ಣ ರೀತಿಯಲ್ಲಿ ಆಚರಿಸಲು ಅಗತ್ಯ ತಯಾರಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್​ ಶರೀಫ್​ ಅಧಿಕಾರಿಗಳಿಗೆ ಸೂಚಿಸಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ 80ನೇ ಸ್ವಾತಂತ್ರೋತ್ಸವದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಅವರು, ವಿವಿಧ ಸಾಂಸತಿಕ ಕಾರ್ಯಕ್ರಮ ಆಯೋಜಿಸಬೇಕು. ಡಿಎಆರ್​ ಮೈದಾನದಲ್ಲಿ ಪ್ರಮುಖ ಕಾರ್ಯಕ್ರಮ ಮತ್ತು ಧ್ವಜಾರೋಹಣ ನಡೆಯಲಿದೆ. ಮಳೆ ಬಂದರೂ ತೊಂದರೆ ಆಗದಂತೆ ಜರ್ಮನ್​ ಟೆಂಟ್​ ಮತ್ತು ಶಾಮಿಯಾನ ವ್ಯವಸ್ಥೆ ಮಾಡಬೇಕು ಎಂದರು.
ಮೈದಾನ ಸಮತಟ್ಟು ಮತ್ತು ವೇದಿಕೆ ನಿರ್ಮಾಣದ ಜವಾಬ್ದಾರಿಯನ್ನು ಲೋಕೋಪಯೋಗಿ ಇಲಾಖೆ ಹಾಗೂ ಮಹಾನಗರ ಪಾಲಿಕೆಗೆ ವಹಿಸಿದ ಅವರು, ಸುರಕ್ಷತೆ ದೃಷ್ಟಿಯಿಂದ ಅಗ್ನಿಶಾಮಕ ವಾಹನ, ಆಂಬುಲೆನ್ಸ್​ ಮತ್ತು ವೈದ್ಯಕಿಯ ತಂಡಗಳು ಸಜ್ಜಾಗಿರಬೇಕು ಎಂದು ಸೂಚನೆ ನೀಡಿದರು.
ಈ ಬಾರಿಯ ವಿಶೇಷ ಆಕರ್ಷಣೆಯಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳಿಯ ಕಲಾವಿದರಿಗಾಗಿ ಮುಕ್ತ ಆಡಿಷನ್​ ಆಯೋಜಿಸಿ. ಆಸಕ್ತರು ಮೂರ್ನಾಲ್ಕು ದಿನದೊಳಗೆ ಕನ್ನಡ ಮತ್ತು ಸಂಸತಿ ಇಲಾಖೆ, ಡಿಡಿಪಿಐ ಅಥವಾ ಡಿಡಿಪಿಯು ಕಚೇರಿಗಳಲ್ಲಿ ಹೆಸರು ನೋಂದಾಯಿಸಬೇಕು. ಬುಧವಾರ ಅಥವಾ ಗುರುವಾರ ನಡೆಯುವ ಆಡಿಷನ್​ನಲ್ಲಿ ಆಯ್ಕೆಯಾದ ತಂಡಗಳಿಗೆ ಪ್ರಮುಖ ವೇದಿಕೆಯಲ್ಲಿ ಪ್ರದರ್ಶನ ನೀಡಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಪೊಲೀಸ್​, ಅರಣ್ಯ, ಗೃಹರಕ್ಷಕ ದಳ, ಎನ್​ಸಿಸಿ ತಂಡಗಳಿಂದ ಪಥಸಂಚಲನ, ನಗರದ ಪ್ರಮುಖ ವೃತ್ತಗಳಲ್ಲಿನ ಪ್ರತಿಮೆಗಳು, ಸರ್ಕಾರಿ ಕಚೇರಿ ಹಾಗೂ ವಾಣಿಜ್ಯ ಸಂಕೀರ್ಣಗಳಿಗೆ ಆಕರ್ಷಕ ದೀಪಾಲಂಕಾರ ಮಾಡಬೇಕು. 15ರ ಸಂಜೆ 5ಕ್ಕೆ ಡಾ.ಎಸ್​.ಎಂ. ಪಂಡಿತ ರಂಗಮಂದಿರದಲ್ಲಿ ಸಾಂಸತಿಕ ಕಾರ್ಯಕ್ರಮ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್​ ಸಂಕನೂರ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಸಿಂಧೆ, ಎಸಿಪಿ ಪ್ರವಿಣ್​ ನಾಯಕ್​, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ,   ಎಸಿ ಸಾಹಿತ್ಯ ಆಲದಕಟ್ಟಿ, ಪ್ರೊಬೇಷನರಿ ಐಎಎಸ್​ ಅಧಿಕಾರಿ ಶಿಕರ್​ ಮೋ ಇತರರಿದ್ದರು.
"

ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಧ್ವಜಾರೋಹಣ ನೆರವೇರಿಸಬೇಕು. ಇಲಾಖೆ ಸಿಬ್ಬಂದಿ ಅಂದು ಬೆಳಗ್ಗೆ 8.15ರೊಳಗೆ ಡಿಎಆರ್​ ಪರೇಡ್​ ಮೈದಾನಕ್ಕೆ ತಲುಪಬೇಕು. ಕರ್ತವ್ಯಲೋಪ ಎಸಗುವ ಅಥವಾ ಗೈರುಹಾಜರಾಗುವ ಅಧಿಕಾರಿ-ಸಿಬ್ಬಂದಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.

— > ಇಕ್ರಮ್​ ಶರೀಫ್​ ಜಿಲ್ಲಾಧಿಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net