ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ಬುಧವಾರ ಕರೆದಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಮಾತನಾಡಿದರು. ರಮೇಶ ಕೋಲಾರ, ಬಾಬು ದೋಖಾ, ಚನ್ನಪ್ಪಗೌಡ ಮೋಸಂಬಿ, ವಿಶ್ವನಾಥ ಸಿರವಾರ, ಮರೆಪ್ಪ ಚಟ್ಟೆರಕರ, ವಾಹಿದಮಿಯಾ, ಸುರೇಶ ಜೈನ್, ಶೇಖ ಇಮಾಮ್ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಸೂಚನೆ
ಯಾದಗಿರಿ ಡಿಸಿ ಕಚೇರಿಯಲ್ಲಿ ಸಭೆ
ಯಾದಗಿರಿ: ಮುಂಬರುವ ಸೆ.೧೭ರಂದು ಕಲ್ಯಾಣ ಕರ್ನಾಟಕ ಉತ್ಸವವನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಸಂಬದಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮ ಶಿಸ್ತುಬದ್ಧ ಮತ್ತು ಸಂಭ್ರಮದಿAದ ಆಚರಿಸಬೇಕು. ಅಲ್ಲದೆ ಎಲ್ಲ ಸರ್ಕಾರಿ ಕಟ್ಟಡಗಳಿಗೆ ದೀಪಾಲಂಕಾರ ಮಾಡಿ ನಗರದ ಅಂದ ಹೆಚ್ಚಿಸಬೇಕು. ಯಾವುದೇ ಲೋಪಗಳಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಅಂದು ಬೆಳಗ್ಗೆ ೮ಕ್ಕೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಲಿದ್ದು, ೯ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಮುಖ ಧ್ವಜಾ ರೋಹಣ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಅದಕ್ಕಾಗಿ ವೇದಿಕೆ, ಶಾಮಿಯಾನ, ಆಸನದ ವ್ಯವಸ್ಥೆ, ಶಿಷ್ಟಾಚಾರದಂತೆ ಗಣ್ಯರನ್ನು ಆಹ್ವಾನಿಸಲು ಸೂಚನೆ ನೀಡಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಶಾಲಾ ತಂಡಗಳನ್ನು ೪ರಿಂದ ೫ ಶಾಲೆಗಳಿಗೆ ಸೀಮಿತಗೊಳಿಸಬೇಕು. ಪ್ರತಿಯೊಂದು ಶಾಲೆಯ ಪ್ರದರ್ಶನದ ಸಮಯ ೭ರಿಂದ ೧೨ ನಿಮಿಷ ನೀಡಲಾಗುವುದು. ಕಲ್ಯಾಣ ಕರ್ನಾಟಕದ ವಿಮೋಚನಾ ಹೋರಾಟದ ಇತಿಹಾಸ ಬಿಂಬಿಸುವ ಪ್ರದರ್ಶನಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮಕ್ಕಾಗಿ ವಿದ್ಯುತ್ ವ್ಯವಸ್ಥೆ, ಅಲಂಕಾರ, ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮ ಆಚರಣೆ, ಮುಖ್ಯ ಕಾರ್ಯಕ್ರಮದ ವೇದಿಕೆ ಹತ್ತಿರ ರಂಗೋಲಿ ಹಾಕುವುದು. ಕ್ರೀಡಾಂಗಣದ ಸ್ವಚ್ಛತೆ, ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಸೂಕ್ತ ಪೊಲೀಸ್ ಬಂದೋಬಸ್ತ್ ಕವಾಯತು ಪ್ರದರ್ಶನಕ್ಕೆ ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳಬೇಕು.
ಅಗ್ನಿಶಾಮಕ, ಆರೋಗ್ಯ ಇಲಾಖೆ ನುರಿತ ಸಿಬ್ಬಂದಿ ಸ್ಥಳದಲ್ಲಿರುವಂತೆ ನೋಡಿಕೊಳ್ಳಬೇಕು. ಅಲ್ಲದೆ ಸಮಾರಂಭದಲ್ಲಿ ಸನ್ಮಾನಿತರಿಗೆ ವ್ಯವಸ್ಥೆ ಮಾಡಬೇಕು. ಶಾಲಾ ಮಕ್ಕಳ ಸಾರಿಗೆ ವ್ಯವಸ್ಥೆ ಡಿಡಿಪಿಐ ನಿರ್ವಹಿಸಲಿದ್ದು, ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ಹಾಗೂ ಪ್ರಥಮ ಚಿಕಿತ್ಸಾ ವ್ಯವಸ್ಥೆ ಇರಲಿದೆ. ನಗರಸಭೆಯಿಂದ ಮೈದಾನ ಹಾಗೂ ಸುತ್ತಮುತ್ತಲಿನ ನೈರ್ಮಲ್ಯ ಮತ್ತು ರಸ್ತೆಗಳಿಗೆ ನೀರು ಸಿಂಪಡಿಸುವAತೆ ಸಂಬಸಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ,ಪ್ರಮುಖರಾದ ಬಾಬು ದೋಖಾ, ಚನ್ನಪ್ಪಗೌಡ ಮೋಸಂಬಿ, ವಿಶ್ವನಾಥ ಸಿರವಾರ, ಮರೆಪ್ಪ ಚಟ್ಟೆರಕರ,ವಾಹಿದಮಿಯಾ, ಸುರೇಶ ಜೈನ್, ಶೇಖ ಇಮಾಮ್, ಎಂ.ಡಿ.ಜುನೇದ್ ಪಾಷಾ ಸೇರಿ ವಿವಿಧ ಸಂಘ ಸಂಸ್ಥೆಗಳ ಪದಾಽಕಾರಿಗಳು ಪಾಲ್ಗೊಂಡಿದ್ದರು.