ಭಕ್ತರು ಮನೆಯಿಂದ ತಂದಿದ್ದ ಬಣ್ಣ ಬಣ್ಣದ ಹೂವುಗಳನ್ನು ಹಿಡಿದು ಮಾತೆಯ ಭಕ್ತಿಗೀತೆಗಳನ್ನು ಹಾಡುತ್ತ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು. ಶನಿವಾರಸಂತೆ, ಬೀಟೆಕಟ್ಟೆ, ಕಳಲೆ ಹೊಸೂರು, ಕೊಡ್ಲಿಪೇಟೆ ಸುತ್ತಮುತ್ತಲಿನ ಕ್ರೈಸ್ತರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.