ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನಾರಿ ಶಕ್ತಿ ವಂದನ್ ಅಧಿನಿಯಮದ ಅಭಿಯಾನದಲ್ಲಿ ಮಾತನಾಡಿದ ಅವರು, ನಾರಿಶಕ್ತಿ ವಂದನ್ ಅಧಿನಿಯಮ ಸಾಕಷ್ಟು ವರ್ಷಗಳಿಂದ ಬಾಕಿ ಇತ್ತು. ಅನೇಕ ವರ್ಷಗಳಿಂದ ಮಹಿಳಾ ಮೀಸಲಾತಿ ಜಾರಿಗೆ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಕಾಂಗ್ರೆಸ್ ಹುನ್ನಾರದಿಂದ ಲೋಕಸಭೆಯಲ್ಲಿ ಅಂಗೀಕರಿಸಲು ಸಾಧ್ಯವಾಗುತ್ತಿರಲಿಲ್ಲ. ಕಳೆದ 10 ವರ್ಷಗಳಿಂದ ಕೇಂದ್ರ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಕೆಲಸ ಮಾಡಿಕೊಂಡು ಬರುತ್ತಿದೆ. ಮಹಿಳೆಯರಿಗೆ ಸ್ವಚ್ಛ ಭಾರತ್ ಅಭಿಯಾನ, ಬಯಲು ಶೌಚ ನಿಮೂರ್ಲನೆ, ಜನ್ಧನ್ ಖಾತೆ, ಮುದ್ರಾ ಯೋಜನೆ, ಬೇಟಿ ಬಚಾವೋ, ಬೇಟಿ ಪಡಾವೋ ಸೇರಿದಂತೆ ನಾನಾ ಯೋಜನೆಗಳನ್ನು ನಾರಿಯರಿಗೆ ನೀಡಿದೆ ಎಂದರು.