ಅಭ್ಯರ್ಥಿಗಳು ಜು.9ರಂದು ಬೆಳಿಗ್ಗೆ 10 ಗಂಟೆವರೆಗೆ ತಮ್ಮ ಇಚ್ಛೆ/ಆಯ್ಕೆಗಳನ್ನು ಹೊಸದಾಗಿ ದಾಖಲಿಸಲು/ಬದಲಿಸಿಕೊಳ್ಳಲು ಹಾಗೂ ತೆಗೆದುಹಾಕಲು/ಕ್ರಮಾಂಕ ಬದಲಿಸಿಕೊಳ್ಳಲು ಅವಕಾಶ
ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಜು.14ರಂದು ಬೆಳಿಗ್ಗೆ 11ಕ್ಕೆ ಪ್ರಕಟಿಸಲಾಗುತ್ತದೆ. ಜು.15ರಂದು ಬೆಳಿಗ್ಗೆ 11 ಗಂಟೆಗೆ ಅಂತಿಮ ಫಲಿತಾಂಶ
ಇದುವರೆಗೂ ಇಚ್ಛೆ/ಆಯ್ಕೆ ದಾಖಲಿಸದೇ ಇರುವ ಅಭ್ಯರ್ಥಿಗಳು ಕೂಡ 750 ರೂ. ಪಾವತಿಸಿ, ಮಾಡಬಹುದು
ಬೆಂಗಳೂರು: ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸಗಳ ಪ್ರವೇಶಕ್ಕೆ ಅಣಕು ಸೀಟು ಹಂಚಿಕೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೋಮವಾರ ಪ್ರಕಟಿಸಿದೆ.
ಇಂಜಿನಿಯರಿಂಗ್ ಅಲ್ಲದೆ, ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಬಿಎಸ್‌ಸಿ ನರ್ಸಿಂಗ್, ಬಿಪಿಟಿ, ಬಿಪಿಒ, ಬಿಎಸ್ಸಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್‌ಗಳ ಅಣಕು ಫಲಿತಾಂಶವನ್ನೂ ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಜೂ.30ರಂದು ಬೆಳಿಗ್ಗೆ 10ಗಂಟೆವರೆಗೆ ದಾಖಲಿಸಿರುವ ಇಚ್ಛೆಗಳನ್ನು ಅಣಕು ಫಲಿತಾಂಶಕ್ಕೆ ಪರಿಗಣಿಸಿ, ಮೆರಿಟ್ ಮತ್ತು ರೋಸ್ಟರ್ ಪ್ರಕಾರ ಸೀಟು ಹಂಚಿಕೆ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಇದು ಅಂತಿಮ ಫಲಿತಾಂಶ ಅಲ್ಲ. ಅಭ್ಯರ್ಥಿಗಳು ಜು.9ರಂದು ಬೆಳಿಗ್ಗೆ 10 ಗಂಟೆವರೆಗೆ ತಮ್ಮ ಇಚ್ಛೆ/ಆಯ್ಕೆಗಳನ್ನು ಹೊಸದಾಗಿ ದಾಖಲಿಸಲು/ಬದಲಿಸಿಕೊಳ್ಳಲು ಹಾಗೂ ತೆಗೆದುಹಾಕಲು/ಕ್ರಮಾಂಕ ಬದಲಿಸಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಜು.14ರಂದು ಬೆಳಿಗ್ಗೆ 11ಕ್ಕೆ ಪ್ರಕಟಿಸಲಾಗುತ್ತದೆ. ಜು.15ರಂದು ಬೆಳಿಗ್ಗೆ 11 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಇದುವರೆಗೂ ಇಚ್ಛೆ/ಆಯ್ಕೆ ದಾಖಲಿಸದೇ ಇರುವ ಅಭ್ಯರ್ಥಿಗಳು ಕೂಡ 750 ರೂ. ಪಾವತಿಸಿ, ಮಾಡಬಹುದು ಎಂದು ಹೇಳಿದ್ದಾರೆ.
ಯೋಗ ಮತ್ತು ನ್ಯಾಚುರೋಪತಿ ಕೋರ್ಸ್‌ಗಳ ಕರಡು ಸೀಟ್ ಮ್ಯಾಟ್ರಿಕ್ಸ್ ಸರ್ಕಾರದಿಂದ ಬಂದಿದ್ದು, ಅದರ ಆಧಾರದ ಮೇಲೆ ಇಚ್ಛೆ/ಆಯ್ಕೆ ದಾಖಲಿಸುವುದಕ್ಕೂ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.