ಸಿಇಟಿ ಆಪ್ಷನ್ ಎಂಟ್ರಿ ಆರಂಭ: ಜುಲೈ 6ಕ್ಕೆ ಅಣಕು ಫಲಿತಾಂಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
Published on

ಪ್ರಮುಖ ಮುಖ್ಯಾಂಶಗಳು

  • ಜೂ.30ರ ಬೆಳಗ್ಗೆ 10ರವರೆಗೆ ಅಭ್ಯರ್ಥಿಗಳು ತಮಗೆ ಇಚ್ಛೆ ಇರುವ ಕಾಲೇಜು ಮತ್ತು ಕೋರ್ಸ್ ಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಬಹುದು
  • ಜು.6ರಂದು ಬೆಳಿಗ್ಗೆ 11ಕ್ಕೆ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟಿಸಲಾಗುತ್ತದೆ. ಜು.9ರವರೆಗೆ ಇಚ್ಛೆ/ಆಯ್ಕೆ ಗಳನ್ನು ಸೇರಿಸಲು/ಅಳಿಸಲು/ಬದಲಾಯಿಸಲು/ಮಾರ್ಪಡಿಸಲು ಅವಕಾಶ
  • ಜು.15ರಂದು ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ
ಬೆಂಗಳೂರು: ಇಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ ವಿಜ್ಞಾನ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ಭಾಗವಾಗಿ ಆಪ್ಷನ್ (ಆಯ್ಕೆ/ಇಚ್ಛೆ) ಗಳನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ತನ್ನ ವೆಬ್ಸೈಟ್‌ನಲ್ಲಿ ಪೋರ್ಟಲ್ ತೆರೆದಿದೆ.
ಜೂ.30ರ ಬೆಳಗ್ಗೆ 10ರವರೆಗೆ ಅಭ್ಯರ್ಥಿಗಳು ತಮಗೆ ಇಚ್ಛೆ ಇರುವ ಕಾಲೇಜು ಮತ್ತು ಕೋರ್ಸ್ ಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಜು.6ರಂದು ಬೆಳಿಗ್ಗೆ 11ಕ್ಕೆ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟಿಸಲಾಗುತ್ತದೆ. ಜು.9ರವರೆಗೆ ಇಚ್ಛೆ/ಆಯ್ಕೆ ಗಳನ್ನು ಸೇರಿಸಲು/ಅಳಿಸಲು/ಬದಲಾಯಿಸಲು/ಮಾರ್ಪಡಿಸಲು ಅವಕಾಶ ನೀಡಲಾಗುತ್ತದೆ. ಅದಾದ ಮೂರು ದಿನಗಳ ನಂತರ ಜು.15ರಂದು ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಎಲ್ಲ ಕೋರ್ಸ್‌ಗಳ ಕರಡು ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅಂತಿಮ ಪಟ್ಟಿಗೆ ಕಾಯುತ್ತಿದ್ದೇವೆ. ಬಂದ ನಂತರ ಎಲ್ಲ ಮಾಹಿತಿಯನ್ನು ನೀಡಲಾಗುವುದು. ಅಲ್ಲಿಯವರೆಗೂ ಅಭ್ಯರ್ಥಿಗಳು ಕಾಯುವ ಅಗತ್ಯ ಇಲ್ಲ. ತಮ್ಮ ಆಪ್ಷನ್ಸ್ ದಾಖಲಿಸಬಹುದು ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರೀ ಸುತ್ತಿನ ಕೌನ್ಸೆಲಿಂಗ್ ಇಲ್ಲ

ನೀಟ್ ಮರು ಪರೀಕ್ಷೆ ಕಾರಣಕ್ಕೆ ವೈದ್ಯಕೀಯ ಅಲ್ಲದೆ ಇತರ ಕೋರ್ಸ್ ಓದುವ ಅಭ್ಯರ್ಥಿಗಳಿಗೆ ಆಗುತ್ತಿದ್ದ ವಿಳಂಬ ತಪ್ಪಿಸಲು ಪ್ರೀ ಸುತ್ತಿನ ಸೀಟು ಹಂಚಿಕೆಗೆ ಮಾಡಿದ್ದ ತೀರ್ಮಾನವನ್ನು ಕೈಬಿಟ್ಟಿದ್ದು, ಈ ಮೊದಲಿನ ಹಾಗೆಯೇ ಮೊದಲ ಸುತ್ತಿನಿಂದಲೇ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ.

ಕರಡು ಸೀಟುಗಳ ಸಂಖ್ಯೆ

- ಪಶುವೈದ್ಯ- 365
- ಬಿಎಸ್‌ಸಿ ಕೃಷಿ 3,922
- ನರ್ಸಿಂಗ್ 35,212
- ಇಂಜಿನಿಯರಿಂಗ್ 76,168
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net