ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಯೋಗ ಮತ್ತು ನ್ಯಾಚುರೋಪಥಿ, ಬಿಎಸ್‌ಸಿ ನರ್ಸಿಂಗ್ ಸೇರಿ ವಿವಿಧ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳು ಇಚ್ಛೆ ದಾಖಲಿಸಲು ಜು.28ರವರೆಗೆ ಅವಕಾಶವಿದೆ. ಈ ಪೈಕಿ ಚಾಯ್ಸ 1 ದಾಖಲಿಸಿದವರು ಶುಲ್ಕ ಪಾವತಿಸಿ ಸೀಟ್ ದೃಢೀಕರಣದ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಲು ಜು.29ರವರೆಗೆ ಅವಕಾಶ ನೀಡಲಾಗಿದೆ. ಇದೇ ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ಪ್ರವೇಶ ಪಡೆದುಕೊಳ್ಳಲು ಜು.29ರ ಸಂಜೆ 6 ಗಂಟೆಯವರೆಗೆ ಸಮಯ ನೀಡಲಾಗಿದೆ ಎಂದು ಕೆಇಎ ತಿಳಿಸಿದೆ.