ಸಿಇಟಿ ವೆರಿಫಿಕೇಷನ್ ಸ್ಲಿಪ್ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
Published on

ಪ್ರಮುಖ ಮುಖ್ಯಾಂಶಗಳು

  • ಸರ್ಕಾರದಿಂದ ಸೀಟ್ ಮ್ಯಾಟ್ರಿಕ್ಸ್ ವಿವರಗಳು ಬಂದ ನಂತರ ಅಭ್ಯರ್ಥಿಗಳಿಗೆ ಆಪ್ಷನ್ಸ್ ದಾಖಲಿಸಲು ಲಿಂಕ್ ಸಕ್ರಿಯಗೊಳಿಸಲಾಗುತ್ತದೆ
  • ಸೀಟು ಹಂಚಿಕೆ ಪ್ರಕ್ರಿಯೆಯ ಮೊದಲ ಘಟ್ಟ ಇದಾಗಿದ್ದು, ಅಭ್ಯರ್ಥಿಗಳ ಪೂರ್ಣ ಮಾಹಿತಿ ಇದರಲ್ಲಿ ಅಡಕವಾಗಿರುತ್ತದೆ.
ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆ ಪ್ರಕ್ರಿಯೆಯ ಮೊದಲ ಭಾಗವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ವೆರಿಫಿಕೇಷನ್ ಸ್ಲಿಪ್ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ತಮ್ಮ ನೋಂದಣಿ ಸಂಖ್ಯೆ, ಪಾಸ್‌ವರ್ಡ್ ಮೊದಲಾದ ಲಾಗಿನ್ ವಿವರಗಳನ್ನು ನಮೂದಿಸಿ ಪರಿಶೀಲನಾ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಸೀಟು ಹಂಚಿಕೆ ಪ್ರಕ್ರಿಯೆಯ ಮೊದಲ ಘಟ್ಟ ಇದಾಗಿದ್ದು, ಅಭ್ಯರ್ಥಿಗಳ ಪೂರ್ಣ ಮಾಹಿತಿ ಇದರಲ್ಲಿ ಅಡಕವಾಗಿರುತ್ತದೆ. ನೋಂದಣಿ ಸಂಖ್ಯೆ, ಪರೀಕ್ಷೆಯಲ್ಲಿ ಪಡೆದ ಅಂಕಗಳು, ರ‌್ಯಾಂಕಿಂಗ್, ಮೀಸಲಾತಿ ವಿವರ, ಸಲ್ಲಿಕೆಯಾದ ಪ್ರಮಾಣಪತ್ರಗಳು ಮೊದಲಾದವುಗಳನ್ನು ಇದರಲ್ಲಿ ನಮೂದಿಸಲಾಗಿರುತ್ತದೆ. ಇವುಗಳು ಸರಿಯಾಗಿವೆಯೇ ಎಂಬುದನ್ನು ಅಭ್ಯರ್ಥಿಗಳು ಪರಿಶೀಲಿಸಿಕೊಳ್ಳಬಹುದು.
ಸರ್ಕಾರದಿಂದ ಸೀಟ್ ಮ್ಯಾಟ್ರಿಕ್ಸ್ ವಿವರಗಳು ಬಂದ ನಂತರ ಅಭ್ಯರ್ಥಿಗಳಿಗೆ ಆಪ್ಷನ್ಸ್ ದಾಖಲಿಸಲು ಲಿಂಕ್ ಸಕ್ರಿಯಗೊಳಿಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಸಿಇಟಿಯಲ್ಲಿ ಒಟ್ಟು 3,09,014 ಅಭ್ಯರ್ಥಿಗಳು ಹಾಜರಾಗಿದ್ದು, 2,92,782 ಮಂದಿ ಅರ್ಹತೆ ಪಡೆದಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net