ಚಂಪಾ ಸಿರಿಗನ್ನಡ ಪ್ರಶಸ್ತಿ ಪ್ರಕಟ

ಸಾ.ರಾ. ಗೋವಿಂದು
ಸಾ.ರಾ. ಗೋವಿಂದು
Published on

ಪ್ರಮುಖ ಮುಖ್ಯಾಂಶಗಳು

  • * ಪ್ರಶಸ್ತಿಯು 10 ಸಾವಿರ ನಗದು, ಫಲಕ ಒಳಗೊಂಡಿದೆ
  • * ಜೂ. 20ರಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ
ಬೆಂಗಳೂರು: ಕರ್ನಾಟಕ ಸ್ವಾಭಿಮಾನಿ ವೇದಿಕೆ ವತಿಯಿಂದ ನೀಡಲಾಗುವ 2026ನೇ ಸಾಲಿನ ‘ಚಂಪಾ ಸಿರಿಗನ್ನಡ ಪ್ರಶಸ್ತಿ’ಗೆ ಕನ್ನಡ ಹೋರಾಟಗಾರ ಸಾ.ರಾ. ಗೋವಿಂದು ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು 10 ಸಾವಿರ ನಗದು, ಫಲಕ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಜೂ. 20ರಂದು ಸಂಜೆ 4 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಹಿರಿಯ ಸಾಹಿತಿ ಡಾ. ಎಸ್.ಜಿ. ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ. ಜಯಮಾಲಾ, ಪ್ರೊ. ಚಂಪಾ ಅವರ ಪುತ್ರಿ ಮೀನಾ ಪಾಟೀಲ್, ಕನ್ನಡ ಹೋರಾಟಗಾರ ಸಿ.ಕೆ.ರಾಮೇಗೌಡ ಇತರರು ಭಾಗವಹಿಸಲಿದ್ದಾರೆ ಎಂದು ವೇದಿಕೆ ಅಧ್ಯಕ್ಷ ಶಂಕರ್ ಹೂಗಾರ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net