ಸೇವಾ ಮನೋಭಾವದಿಂದ ಬದಲಾವಣೆ ಸಾಧ್ಯ / SULIBELE

ಸೂಲಿಬೆಲೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಾಲೇಜು ಉಪಾಧ್ಯಕ್ಷ ಬಿ.ಎನ್​.ಗೋಪಾಲಗೌಡ ಉಚಿತ ಕನ್ನಡಕಗಳನ್ನು ವಿತರಿಸಿದರು. ಟ್ರಸ್ಟ್​ ಉಪಾಧ್ಯಕ್ಷ ಚೌಡೇಗೌಡ, ಮುರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ವೆಂಕಟೇಶ್​, ಕಾಲೇಜು ಪ್ರಾಂಶುಪಾಲ ಮಂಜುನಾಥ್​, ಪಿಡಿಒ ಮಂಜುನಾಥ್​, ಸೈಯದ್​ ಮಹಬೂಬ್​ ಇತರರು ಇದ್ದರು.

Published on
ಸೂಲಿಬೆಲೆ : ಸಾಮಾಜಿಕ ಕಾಳಜಿ ಮತ್ತು ಸೇವಾ ಮನೊಭಾವದಿಂದ ಬದಲಾವಣೆ ಸಾಧ್ಯ. ಇಂತಹ ಕಾರ್ಯಕ್ಕೆ ಜೇನುಗೂಡು ರೂರಲ್​ ಡೆವಲಪ್​ಮೆಂಟ್​ ಆ್ಯಂಡ್​ ಕಲ್ಚರಲ್​ ಟ್ರಸ್ಟ್​ ಸಾಕ್ಷಿಯಾಗಿದೆ ಎಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಎನ್​.ಗೋಪಾಲಗೌಡ ಹೇಳಿದರು.
ಹೊಸಕೋಟೆ ತಾಲೂಕಿನ ಸೂಲಿಬೆಲೆ ಸರ್ಕಾರಿ ಪಿಯು ಕಾಲೇಜಿನಲ್ಲಿ ಜೇನುಗೂಡು ಟ್ರಸ್ಟ್​ನಿಂದ ಹಮ್ಮಿಕೊಂಡಿದ್ದ ಉಚಿತ ಕನ್ನಡಕಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ, ಜೇನುಗೂಡು ಟ್ರಸ್ಟ್​ ಉಚಿತ ನೇತ್ರ ತಪಾಸಣೆ, ಆರೋಗ್ಯ ತಪಾಸಣೆ ಹಾಗೂ ಸರ್ಕಾರಿ ಶಾಲೆ ಕಾಲೇಜುಗಳ ಬಲವರ್ಧನೆಗೆ ಶ್ರಮಿಸುತ್ತಿದೆ ಎಂದರು.
ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಂಜುನಾಥ್​ ಮಾತನಾಡಿ, ಸರ್ಕಾರಿ ಶಾಲೆ ಮತ್ತು ಕಾಲೇಜುಗಳ ಅಭಿವೃದ್ಧಿಗಾಗಿ ಸದಾ ಸಹಕಾರ ನೀಡುತ್ತೇವೆ. ಕುಡಿಯುವ ನೀರಿನ ಪೂರೈಕೆ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ವರ್ಷದಲ್ಲಿ 2 ಬಾರಿ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ ಹಮ್ಮಿಕೊಳ್ಳುವ ಮೂಲಕ ಗ್ರಾಮೀಣ ಭಾಗದಲ್ಲಿ ಅನೇಕ ಜನರಿಗೆ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಶಸ್ತ್ರಚಿಕಿತ್ಸೆ ಹಾಗೂ 300ಕ್ಕೂ ಹೆಚ್ಚು ಜನರಿಗೆ ಉಚಿತ ಕನ್ನಡಕಗಳ ವಿತರಣೆ ಮಾಡಲಾಗಿದೆ ಎಂದು ಜೇನುಗೂಡು ಟ್ರಸ್ಟ್​ ಉಪಾಧ್ಯಕ್ಷ ಕೆ.ಎಂ.ಚೌಡೇಗೌಡ ತಿಳಿಸಿದರು.
ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಂಜುನಾಥ್​, ವಲಯ ಅರಣ್ಯಾಧಿಕಾರಿ ಪುಷ್ಪಾ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಪ್ರಶಾಂತ್​, ನಿರ್ದೇಶಕರಾದ ಸೈಯದ್​ ಮಹಬೂಬ್​, ಜಿಯಾವುಲ್ಲಾ, ನಯಾಜ್​ ಖಾನ್​, ಅತ್ತಿಬೆಲೆ ಮಂಜುನಾಥ್​, ಬೆಟ್ಟಹಳ್ಳಿ ಗೋಪಿನಾಥ್​, ಉಪನ್ಯಾಸಕರಾದ ಸುಬ್ರಹ್ಮಣಿ, ಕುಮಾರ್​ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net