ಸಾರ್ವಜನಿಕ ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ ಹಿಡಿದು ಚಿಕಿತ್ಸೆ

ಮೊಬೈಲ್ ಬೆಳಕಿನಲ್ಲಿ ರೋಗಿಗಳಿಗೆ ಚಿಕಿತ್ಸೆ
ಮೊಬೈಲ್ ಬೆಳಕಿನಲ್ಲಿ ರೋಗಿಗಳಿಗೆ ಚಿಕಿತ್ಸೆ
Published on

ಪ್ರಮುಖ ಮುಖ್ಯಾಂಶಗಳು

  • ಸಾರ್ವಜನಿಕ ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬಳಸಿ ಚಿಕಿತ್ಸೆ
  • ಚಿಕ್ಕೋಡಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಘಟನೆ
  • ವಿದ್ಯುತ್ ವ್ಯತ್ಯಯ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಬೇಜವಾಬ್ದಾರಿ
ಸಾರ್ವಜನಿಕ ಆಸ್ಪತ್ರೆಗೆ ಕರೆಂಟ್ ಶಾಕ್
|ಮೊಬೈಲ್ ಬೆಳಕಿನಲ್ಲಿ ಚಿಕಿತ್ಸೆ | ಸಾರ್ವಜನಿಕರ ಆಕ್ರೋಶ
ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ: ಪಟ್ಟಣದಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯ ಹಿನ್ನಲೆ ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿ ಮೊಬೈಲ್ ಬೆಳಕಿನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಆಗಮಿಸಿದ ರೋಗಿಗಳಿಗೆ ಮತ್ತು ಒಳ ರೋಗಿಗಳಿಗೆ ಸ್ಥಳೀಯ ಸಿಬ್ಬಂದಿ ಮೊಬೈಲ್ ಟಾರ್ಚ್ ಬಳಸಿ ಚಿಕಿತ್ಸೆ ನೀಡಿದ್ದಾರೆ.ಜನರೇಟರ್ ಇದ್ದರು ಕತ್ತಲಿನಲ್ಲಿ ಚಿಕಿತ್ಸೆ ನೀಡಿದ್ದು, ಅಧಿಕಾರಿಗಳ ಬೇಜವಾಬ್ದಾರರಿಗೆ ಸಾಕ್ಷಿಯಾಗಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಮಹೇಶ ನಾಗರಬೆಟ್ಟ ಅವರು ಬೆಳಗ್ಗೆಯಿಂದ ವಿದ್ಯುತ್ ವ್ಯತ್ಯಯವಾಗಿದ್ದು,ಆಸ್ಪತ್ರೆಯಲ್ಲಿ ಜನರೇಟರ್ ಗಳು ಇದ್ದು,ಅವಶ್ಯಕತೆ ಇದ್ದಾಗ ಬಳಸಲಾಗಿದೆ,ರೋಗಿಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net