ಕಾಲೇಜಿನ ಹಿಂಭಾಗ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಲಿಫ್ಟ್ ನಿರ್ಮಾಣಕ್ಕಾಗಿ ಗುಂಡಿ ತೋಡಲಾಗಿತ್ತು. ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಗುಂಡಿಯಲ್ಲಿ ನೀರು ತುಂಬಿಕೊಂಡಿದ್ದು, ಮಗು ಆಟವಾಡುತ್ತಿದ್ದಾಗ ಗುಂಡಿಗೆ ಬಿದ್ದು ಮೃತಪಟ್ಟಿದೆ. ಸಾರ್ವಜನಿಕ ಆಸ್ಪತ್ರೆಯ ಮರಣೋತ್ತರ ಪರೀಾ ಕೊಠಡಿ ಮುಂಭಾಗ ಪಾಲಕರು ಕಣ್ಣೀರು ಹಾಕುತ್ತಿರುವ ದೃಶ್ಯ ಎಲ್ಲರ ಕಣ್ಣನ್ನು ಒದ್ದೆಯಾಗಿಸಿತ್ತು. ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.