ನಗರದ ಅಬ್ದುಲ್ ನಜೀರ್ ಸಾಬ್ ಸಂಸ್ಥೆಯಲ್ಲಿ ಶುಕ್ರವಾರ ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 12-18 ವರ್ಷದ ಮಕ್ಕಳ 4 ದಿನಗಳ ಬಾಲ ಬಾಂಧವ್ಯ ವಿಭಾಗೀಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಬಾರಿ ಧಾರವಾಡದಲ್ಲಿ ನಡೆಯುತ್ತಿದ್ದ ಈ ಕಾರ್ಯಕ್ರಮ ಕಲಬುರಗಿಯಲ್ಲಿ ನಡೆದಿರುವುದು ಸಂತಸ ತಂದಿದೆ, ಮಕ್ಕಳ ಸಹಾಯವಾಣಿ, ಅಕ್ಕಪಡೆ, ಬಾಲ್ಯವಿವಾಹ ತಡೆ ಹಾಗೂ ಶಿಕ್ಷಣದ ಮಹತ್ವದ ಕುರಿತು ಜಾಗೃತಿ ಮೂಡಿಸಿದರು.