ಚಿತ್ರದುರ್ಗ ಬಸ್​ ದುರಂತ: ಅಪಘಾತ ಕುರಿತ ತನಿಖೆಗೆ ಸಿಎಂ ಆದೇಶ; 5 ಲಕ್ಷ ರೂ. ಪರಿಹಾರ ಘೋಷಣೆ

ಚಿತ್ರದುರ್ಗ ಬಸ್​ ದುರಂತ
ಚಿತ್ರದುರ್ಗ ಬಸ್​ ದುರಂತ
Published on

ಪ್ರಮುಖ ಮುಖ್ಯಾಂಶಗಳು

  • ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಬಸ್​-ಲಾರಿ ಅಪಘಾತ
  • ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದ ಲಾರಿ ಮತ್ತು ಬಸ್​
  • ಬಸ್​ ದುರಂತದಲ್ಲಿ ಚಾಲಕ ಸೇರಿ ಐವರು ದುರ್ಮರಣ
  • ಘಟನೆ ಬೆನ್ನಲ್ಲೇ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಇಂದು (ಡಿ.25) ಮುಂಜಾನೆ 2 ಗಂಟೆ ಸಮಯದಲ್ಲಿ ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದ ಲಾರಿ ಮತ್ತು ಬಸ್​ ನಡುವಿನ ಭೀಕರ ಅಪಘಾತದಲ್ಲಿ 9 ಮಂದಿ ಸಜೀವ ದಹನವಾಗಿದ್ದಾರೆ. ದುರಂತ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿ, ಪರಿಹಾರ ಹಣ ಘೋಷಿಸಿದರು.
ಚಿತ್ರದುರ್ಗದಲ್ಲಿ‌ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು. ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆಹಚ್ಚಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ

ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ, ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

ಇಲ್ಲಿಯವರೆಗೆ ಒಟ್ಟು 5 ಮಂದಿ ಮೃತ

ಆರಂಭದಲ್ಲಿ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 17 ಎನ್ನಲಾಗಿತ್ತು. ಆದರೆ, ಮೃತದೇಹಗಳನ್ನು ಹೊರತೆಗೆಯುವ ಕಾರ್ಯಕ್ಕೆ ಮುಂದಾದಾಗ ಸಂಖ್ಯೆಯಲ್ಲಿ ಬದಲಾವಣೆಗೊಂಡಿತು. ಇತ್ತೀಚಿನ ವರದಿಗಳ ಪ್ರಕಾರ, ಲಾರಿ ಚಾಲಕ ಸೇರಿ ಐವರು ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾರೆ. ಇನ್ನೂ ಹಲವರ ಮೃತದೇಹ ಸಿಕ್ಕಿದ್ದೇ ಆದರೂ ಗುರುತು ಪತ್ತೆಯಾಗಬೇಕಿದೆ. ಮೂವರು ನಾಪತ್ತೆ ಎನ್ನಲಾಗಿದ್ದು, ಅವರ ಬಗ್ಗೆಯೂ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net