ಪೌರಕಾರ್ಮಿಕರು ಆರೋಗ್ಯದತ್ತ ಗಮನಹರಿಸಲಿ

Civic workers should pay attention to their health.
Civic workers should pay attention to their health.
Published on
ಕೋಲಾರ: ಸಮಾಜದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪೌರಕಾರ್ಮಿಕರ ಪಾತ್ರ ಬಹಳ ದೊಡ್ಡದು. ಸಾರ್ವಜನಿಕರ ಸ್ವಾಸ್ಥ$್ಯ ಕಾಪಾಡುವ ನೀವು, ಮೊದಲು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್​ ನ್ಯಾಯಾಧೀಶ ಪ್ರಭು ಎನ್​. ಬಡಿಗೇರ್​ ಸಲಹೆ ನೀಡಿದರು.
ನಗರಸಭೆ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಪೌರಕಾರ್ಮಿಕರು ನಿತ್ಯ ಕಸ ವಿಲೇವಾರಿ ಮಾಡುವಾಗ ಕಡ್ಡಾಯವಾಗಿ ಗ್ಲೌಸ್​ ಮತ್ತು ಮಾಸ್ಟ್​ ಧರಿಸಬೇಕು. ನಗರಸಭೆಯಿಂದ ನೀಡಲಾಗುವ ಸುರತಾ ಪರಿಕರಗಳನ್ನು ಕಡೆಗಣಿಸದೆ ಬಳಸಬೇಕು ಎಂದು ಕಿವಿಮಾತು ಹೇಳಿದರು.
ರಕ್ತಹಿನತೆ, ಚರ್ಮರೋಗ, ಹಾಗೂ ಉಸಿರಾಟದ ತೊಂದರೆಗಳು ಪೌರಕಾರ್ಮಿಕರಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿದ್ದರೂ ತಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು. ಪೌರಕಾರ್ಮಿಕರಿಗೆ ಉಚಿತ ಕಾನೂನು ನೆರವಿನ ಬಗ್ಗೆ ಮಾಹಿತಿ ನೀಡಿದ ಅವರು, ನಿಮ್ಮ ಆಸ್ತಿ, ಕೌಟುಂಬಿಕ ಸಮಸ್ಯೆಗಳು ಅಥವಾ ಬೇರೆ ಯಾವುದೇ ವಿಚಾರಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಉಚಿತ ಕಾನೂನು ನೆರವು ಲಭ್ಯವಿದೆ. ಪ್ರಾಧಿಕಾರದಿಂದಲೇ ಉಚಿತವಾಗಿ ವಕೀಲರನ್ನು ನೇಮಿಸಲಾಗುವುದು, ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ದಲ್ಲಾಳಿಗಳ ಮೊರೆ ಹೋಗಿ ಹಣ ಕಳೆದುಕೊಳ್ಳಬೇಡಿ ಎಂದು ಭರವಸೆ ನೀಡಿದರು.
ಪೌರಕಾರ್ಮಿಕ ಸಂದ ಉಪಾಧ್ಯ ವೆಂಕಟೇಶ್​, ಸುಬ್ರಮಣಿ, ನಗರಸಭೆ ವ್ಯವಸ್ಥಾಪಕಿ ರಾಜೇಶ್ವರಿ, ಆರೋಗ್ಯಾಧಿಕಾರಿ ಸಂಜಯ್​ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net