ನಾಗರಿಕ ಹಕ್ಕುಗಳ ಜಾಗೃತಿ ಅವಶ್ಯ

ವಿಜಯಪುರದ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ನಾಗರಿಕ ಪೌರತ್ವ ತರಬೇತಿ ಶಿಬಿರವನ್ನು ಪ್ರೊ. ವಿಜಯಾ ಕೋರಿಶೆಟ್ಟಿ ಉದ್ಘಾಟಿಸಿದರು. ಸಕ್ಪಾಲ್ ಹೂವಣ್ಣ, ಅಶೋಕಕುಮಾರ ಸುರಪುರ ಮತ್ತಿತರರಿದ್ದಾರೆ.
ವಿಜಯಪುರದ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ನಾಗರಿಕ ಪೌರತ್ವ ತರಬೇತಿ ಶಿಬಿರವನ್ನು ಪ್ರೊ. ವಿಜಯಾ ಕೋರಿಶೆಟ್ಟಿ ಉದ್ಘಾಟಿಸಿದರು. ಸಕ್ಪಾಲ್ ಹೂವಣ್ಣ, ಅಶೋಕಕುಮಾರ ಸುರಪುರ ಮತ್ತಿತರರಿದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿಕೆ
  • ನಾಗರಿಕ ಪೌರತ್ವ ತರಬೇತಿ ಶಿಬಿರ
ವಿಜಯಪುರ: ಉತ್ತಮ ನಾಗರಿಕರ ನಿರ್ಮಾಣದಲ್ಲಿ ಪೌರತ್ವ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಅರಿವು ಹೊಂದುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಾಗರಿಕ ಪೌರತ್ವ ತರಬೇತಿ ಶಿಬಿರದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ನಿಕಾಯದ ಡೀನ್ ಸಕ್ಪಾಲ್ ಹೂವಣ್ಣ ಮಾತನಾಡಿ, ಪ್ರಜಾಪ್ರಭುತ್ವದ ಯಶಸ್ಸಿಗೆ ಜವಾಬ್ದಾರಿಯುತ ನಾಗರಿಕರ ಪಾತ್ರ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಅಶೋಕಕುಮಾರ ಸುರಪುರ ಮಾತನಾಡಿ, ಶಿಬಿರದ ಉದ್ದೇಶಗಳನ್ನು ವಿವರಿಸಿ, ಭಾವೈಕ್ಯತೆ ಹಾಗೂ ಸಮೂಹ ಜೀವನದ ಮಹತ್ವ ತಿಳಿಸಿದರು.
ಯು.ಕೆ. ಕುಲಕರ್ಣಿ, ಪ್ರಕಾಶ ಸಣ್ಣಕ್ಕನವರ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net