ರಸ್ತೆ ಅತಿಕ್ರಮಣ ತೆರವು ಮಾಡಿ

ಲಿಂಗಸುಗೂರಿನಲ್ಲಿ ರಸ್ತೆ ಬದಿ ನಿರ್ಮಿಸಿಕೊಂಡಿರುವ ಡಬ್ಬಾ ಅಂಗಡಿಗಳಿಗೆ ಸಹಾಯಕ ಆಯುಕ್ತ ಬಸವಣೆಪ್ಪ ಕಲಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು. ಪುರಸಭೆ ಮುಖ್ಯಾಧಿಕಾರಿ ನಟರಾಜ, ಪರಿಸರ ಅಧಿಕಾರಿ ಗಿರಿಜಾ, ಪೊಲೀಸರು ಇದ್ದರು.
ಲಿಂಗಸುಗೂರಿನಲ್ಲಿ ರಸ್ತೆ ಬದಿ ನಿರ್ಮಿಸಿಕೊಂಡಿರುವ ಡಬ್ಬಾ ಅಂಗಡಿಗಳಿಗೆ ಸಹಾಯಕ ಆಯುಕ್ತ ಬಸವಣೆಪ್ಪ ಕಲಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು. ಪುರಸಭೆ ಮುಖ್ಯಾಧಿಕಾರಿ ನಟರಾಜ, ಪರಿಸರ ಅಧಿಕಾರಿ ಗಿರಿಜಾ, ಪೊಲೀಸರು ಇದ್ದರು.
Published on
ಲಿಂಗಸುಗೂರು: ಇಲ್ಲಿನ ಬಸ್ ನಿಲ್ದಾಣ ಸರ್ಕಲ್, ಪದವಿ ಪೂರ್ವ ಕಾಲೇಜು ಮುಂಭಾಗ ಸೇರಿದಂತೆ ಪ್ರಮುಖ ರಸ್ತೆಗಳು, ಫುಟ್‌ಪಾತ್ ಮೇಲೆ ಡಬ್ಬಾ ಅಂಗಡಿಗಳನ್ನಿಟ್ಟು ವ್ಯಾಪಾರ ಮಾಡುತ್ತಿರುವ ಸ್ಥಳಗಳಿಗೆ ಸಹಾಯಕ ಆಯುಕ್ತ ಬಸವಣೆಪ್ಪ ಕಲಶೆಟ್ಟಿ ಗುರುವಾರ ಭೇಟಿ, ಜಾಗ ಖಾಲಿ ಮಾಡುವಂತೆ ಸೂಚನೆ ನೀಡಿದರು.
ರಸ್ತೆ ಬದಿಯಲ್ಲಿ ಅಂಗಡಿಗಳನ್ನು ನಿರ್ಮಾಣ ಮಾಡಿದ್ದರಿಂದ ವಾಹನ ಸಂಚಾರ, ಪಾದಚಾರಿಗಳ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಬಂದಿವೆ. ತಳ್ಳುವ ಅಂಗಡಿಗಳ ಬದಲು ಅಂಗಡಿಗಳನ್ನು ನಿರ್ಮಿಸಿರುವುದರಿಂದ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.
 ಸ್ವತಃ ನೀವೇ ಅಂಗಡಿಗಳನ್ನು ತೆರವು ಮಾಡಬೇಕು. ಇಲ್ಲದಿದ್ದರೆ ಪುರಸಭೆ ಅಧಿಕಾರಿಗಳ ಸಮ್ಮುಖದಲ್ಲಿ ಖಾಲಿ ಮಾಡಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಪುರಸಭೆ ಮುಖ್ಯಾಧಿಕಾರಿ ನಟರಾಜ, ಪರಿಸರ ಅಧಿಕಾರಿ ಗಿರಿಜಾ, ಪೊಲೀಸರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net