ಜಿಲ್ಲಾ ಆರ್ಸಿಎಚ್ ಅಧಿಕಾರಿಗಳು ಮಾತನಾಡಿ, ಜಿಲ್ಲೆಯಲ್ಲಿ ಎಎನ್ಸಿ ನೋಂದಣಿ ಶೇ.90 ಆಗಿದ್ದು, ಜಿಲ್ಲೆಯಲ್ಲಿ ಒಟ್ಟು 63 ಪ್ರತಿಶತ ಸಿಜೇರಿಯನ್ ಹೆರಿಗೆಗಳು ಖಾಸಗಿ ಆಸ್ಪತ್ರೆಯಲ್ಲಿ ಜರುಗಿರುತ್ತವೆ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.27 ಸಿಜೆರಿಯನ್ ಹೆರಿಗೆ ಆಗಿವೆ. ರಾಷ್ಟ್ರೀಯ ಬಾಲ ಸ್ವಾಸ್ಥ$್ಯ ಕಾರ್ಯಕ್ರಮದಡಿಯಲ್ಲಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾದ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ಏಪ್ರಿಲ್ ತಿಂಗಳ ಅಂತ್ಯದವರೆಗೆ ಅಂಗನವಾಡಿ ಕೇಂದ್ರಗಳಲ್ಲಿ 9427 ಮಕ್ಕಳಿಗೆ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಲಾಗಿರುತ್ತದೆ ಎಂದು ತಿಳಿಸಿದರು. ಈ ವೇಳೆ ಡಿಸಿ ಅವರು ಖಾಸಗಿ ಆಸ್ಪತ್ರೆಗಳಲ್ಲಿ ನಡೆಯುವ ಸಿಜೆರಿಯನ್ ಹೆರಿಗೆಗಳ ಬಗ್ಗೆ ಪರಿಶೀಲಿಸಲು ಸೂಚಿಸಿದರು.