ಅಂದಾಜು 27 ಕೋಟಿ ರೂ. ವೆಚ್ಚದಲ್ಲಿ 60 ದಿನಗಳ ಕಾಲ (ಸುಮಾರು 200 ಗಂಟೆ) ಮೋಡ ಬಿತ್ತನೆ ನಡೆಯಲಿದ್ದು, ಪ್ರತಿದಿನ ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಾರ್ಯಾಚರಣೆ ಇರಲಿದೆ. ಸೆಪ್ಟೆಂಬರ್ ತಿಂಗಳಲ್ಲಿ ದಟ್ಟ ಮೋಡಗಳು ಹೆಚ್ಚಾಗಿ ಕಾಣಿಸಿಕೊಳ್ಳಲಿದ್ದು, ಅಕ್ಟೋಬರ್‌ನಲ್ಲಿ ಪ್ರಮಾಣ ಕಡಿಮೆಯಾಗಲಿದೆ. ಹೀಗಾಗಿ ಪ್ರಸ್ತುತ ಸಮಯ ಮೋಡ ಬಿತ್ತನೆಗೆ ಅತ್ಯಂತ ಸೂಕ್ತವಾಗಿದೆ ಎಂದು ತಿಳಿಸಿದರು.