

ಹಾವೇರಿ:ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ.ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು CM ಸಿದ್ದರಾಮಯ್ಯ ಅವರು ಘೋಷಿಸಿ, ರಾಜ್ಯದಜಿಡಿಪಿ ದೇಶದಲ್ಲೇ ನಂಬರ್ ಒನ್ಆಗಿಸಿದ್ದು ನಮ್ಮ ಜನಪರ ಸರ್ಕಾರಎಂದರು.
ಜಿಲ್ಲಾಡಳಿತಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದಸರ್ಕರದ ಸಹಸ್ರ ದಿನಾಚರಣೆ ಮತ್ತು ಒಂದು ಲಕ್ಷ ಮಂದಿಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮವನ್ನುಉದ್ಘಾಟಿಸಿ ಮಾತನಾಡಿದರು. ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ಆಗಿಸಿದ್ದು ನಮ್ಮ ಜನಪರ ಸರ್ಕಾರ.GST ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ ಎಂದು ದಾಖಲೆಗಳನ್ನು ಮಂಡಿಸಿದರು.
ಈ ಎಲ್ಲಾ ಸಾಧನೆ ಮತ್ತು ದಾಖಲೆಗಳನ್ನು ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಮಾಡಿ ತೋರಿಸಿದ್ದೇವೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದಬಸವರಾಜ ಬೊಮ್ಮಾಯಿಯವರೂ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಕೂಡ ರಾಜ್ಯಕ್ಕೆ ಆಗುತ್ತಿರುವಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಬಾಯಿ ಬಿಡುತ್ತಿಲ್ಲ ಎಂದುಸಿಎಂ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮಸರ್ಕಾರ ಬಂದು 2 ವರ್ಷ 9 ತಿಂಗಳಾಯ್ತು. ನಾವುಕೊಟ್ಟ ಭರವಸೆಗಳಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ. ಉಳಿದ ಅವಧಿಯಲ್ಲಿ ಬಾಕಿಭರವಸೆಗಳನ್ನೂ ಈಡೇರಿಸಲಾಗುವುದು. 2023-18 ರಲ್ಲೂ ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸಿ, ಪ್ರಣಾಳಿಕೆಯಲ್ಲಿ ಇಲ್ಲದ 30 ಭರವಸೆಗಳನ್ನು ಈಡೇರಿಸಿ "ನುಡಿದಂತೆ ನಡೆದು" ದಾಖಲೆ ಮಾಡಿದ್ದೇವೆ ಎಂದರು.
ಅಧಿಕಾರಇದ್ದಾಗ ಕೊಟ್ಟ ಭರವಸೆ ಈಡೇರಿಸದ ಬಿಜೆಪಿ ಈಗ ನಮ್ಮ ಖಜಾನೆಖಾಲಿ ಆಗಿದೆ ಎನ್ನುವ ಸುಳ್ಳು ಪ್ರಚಾರದಲ್ಲಿ ನಿರತವಾಗಿದೆ.ಇಲ್ಲಿಯವರೆಗೂಗ್ಯಾರಂಟಿಗಳ ಮೂಲಕ 118000 ಕೋಟಿ ರೂಪಾಯಿಗಳನ್ನು ನೇರವಾಗಿರಾಜ್ಯದ ಜನರ ಖಾತೆಗೆ ಹಾಕಿದ್ದೇವೆಎಂದರು.
ಅಮಾರ್ತ್ಯಸೇನ್, ಅಭಿಜಿತ್ಬ್ಯಾನರ್ಜಿ ಮುಂತಾದ ಆರ್ಥಿಕ ತಜ್ಞರ ಜೊತೆಗೆ ದಿನ ಪತ್ರಿಕೆಗಳು ಮತ್ತುವಿಶ್ವ ವಿದ್ಯಾಲಯಗಳ ಅಧ್ಯಯನಗಳು ವ್ಯಕ್ತಪಡಿಸಿದ್ದ ಸದಾಭಿಪ್ರಾಯಗಳನ್ನು ಮುಖ್ಯಮಂತ್ರಿಗಳು ಓದಿ ವಿವರಿಸಿ, ಬಿಜೆಪಿಯವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ ಎಂದರು. ಕೇಂದ್ರಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ. 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆಸಾಕ್ಷಿಯಾಗಿದೆ ಎಂದರು.
ನಮ್ಮಸರ್ಕಾರ 1000 ದಿನಗಳನ್ನು ಯಶಸ್ವಿಯಾಗಿ ಆಡಳಿತ ನಡೆಸಿದ್ದು, ನುಡಿದಂತೆ ನಡೆಯುವುದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯತಿಳಿಸಿದರು.