ಶಾಲಾ ಹಂತದಲ್ಲೇ ಶಿಕ್ಷಣದ ಗುಣಮಟ್ಟವನ್ನು ಅತ್ಯುತ್ತಮ ಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಸುಮಾರು ಒಂದು ಸಾವಿರ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಸುಧಾರಿತ ಮೂಲಭೂತ ಸೌಕರ್ಯಗಳು, ದ್ವಿಭಾಷಾ ಬೋಧನಾ ಕ್ರಮ, ಡಿಜಿಟಲ್ ತರಗತಿ ಕೊಠಡಿಗಳು, ವೃತ್ತಿಪರ ಕೌಶಲ್ಯ ಶಿಕ್ಷಣ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಒದಗಿಸಲಾಗುತ್ತಿದ್ದು, ಇದರಿಂದ ಬರೋಬ್ಬರಿ ಹತ್ತು ಲಕ್ಷ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ವಿವರಿಸಿದರು.