ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ, ಡ್ರಗ್ಸ್ ಪ್ರಕರಣಗಳ ನಿಯಂತ್ರಣಕ್ಕಾಗಿ ಕಾನೂನು ತಿದ್ದುಪಡಿ ತರುವ ಕುರಿತು ಸಚಿವ ಸಂಪುಟದಲ್ಲಿ ರ್ಚಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು. ರಾಜ್ಯದಲ್ಲಿ ಕೊಲೆ, ಸುಲಿಗೆ, ಅತ್ಯಾಚಾರ ಪ್ರಕರಣಗಳು 2023ರಿಂದ ಇಳಿಮುಖವಾಗಿದೆ. ಆದರೆ ಮಾದಕವಸ್ತು ಸಾಗಣೆ, ಮಾರಾಟ ದಂಧೆ ಹಾಗೂ ಸೈಬರ್ ಪ್ರಕರಣ ಹೆಚ್ಚಾಗುತ್ತಿದೆ.