ಈಡಿಗ ಸಮಾಜ ಕಡೆಗಣಿಸಿದ್ದಾರೆ ಸಿಎಂ Pressmeet

ತಿಪಟೂರು Pressmeet ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ ಇದ್ದರು.
ತಿಪಟೂರು Pressmeet ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಮುದಾಯದ ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ ಬೇಸರ
ತಿಪಟೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ತರುವಲ್ಲಿ Pressmeet ಮಹತ್ತರ ಪಾತ್ರವಹಿಸಿದ್ದ ಈಡಿಗ ಸಮುದಾಯವನ್ನು ಕಂಡರೆ ಮುಖ್ಯಮಂತ್ರಿಗಳಿಗೆ ಆಗುತ್ತಿಲ್ಲ ಎಂದು ಈಡಿಗ ಸಮುದಾಯದ ಪೀಠಾಧಿಪತಿ ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದರು.
ನಗರದಲ್ಲಿ ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿರೋಧ ಪಕ್ಷವಾಗಿದ್ದ ಸಂದರ್ಭ ಅಹಿಂದವನ್ನು ಅಪ್ಪಿಕೊಂಡ ಸಿದ್ದರಾಮಯ್ಯ, ಆಡಳಿತ ಹಿಡಿದ ನಂತರ ಅಹಿಂದವನ್ನು ಕಡೆಗಾಣಿಸಿದ್ದಾರೆ. ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಮುದಾಯದ ನಾರಾಯಣಗುರು ನಿಗಮ ಸ್ಥಾಪನೆ ಮಾಡಿ 10 ಕೋಟಿ ರೂ. ಅನುದಾನ ಮತ್ತು ಕುಲಶಾಸ್ತ್ರ ಅಧ್ಯಯನಕ್ಕಾಗಿ 25 ಲಕ್ಷ ರೂ. ನೀಡಲಾಗಿತ್ತು. ಆದರೆ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷಗಳಲ್ಲಿ ಈಡಿಗ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಾಣಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಜಕಾರಣದಲ್ಲಿ ಜಾತಿ ಮತ್ತು ಹಣ ಅಬ್ಬರಿಸುತ್ತಿರುವ ಸ್ಥಿತಿಯಲ್ಲಿ ಸಮುದಾಯದ ಯುವಕರು ಒಗ್ಗಟ್ಟಾಗಿ ಹೋರಾಡಬೇಕಿದೆ. ಇಡೀ ಸಮುದಾಯವನ್ನು ತಮ್ಮ ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸುತ್ತಿರುವ ಕೆಲ ಮುಖಂಡರು, ಶಾಸಕರು ತಮ್ಮ ವರ್ತನೆ ಬದಲಾಯಿಸಿಕೊಂಡು ಸಮುದಾಯಕ್ಕೆ ಅತ್ಯಗತ್ಯವಾಗಿ ಬೇಕಿರುವ ಎಸ್​ಟಿ ಮೀಸಲಾತಿಗೆ ಹೋರಾಡಬೇಕಿದೆ.
ಈ ನಿಟ್ಟಿನಲ್ಲಿ ಸರ್ಕಾರದ ಕಣ್ಣು ತೆರೆಸಲು ಮುಂಬರುವ ಜನವರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಶಕ್ತೀಪಿಠ ಕರದಾಳದಿಂದ ಬೆಂಗಳೂರುವರೆಗೂ ಪಾದಯತ್ರೆ ಹಮ್ಮಿಕೊಳ್ಳಲಾಗುವುದು. ಅಷ್ಟರೊಳಗೆ ನಮ್ಮ ಸಮುದಾಯದ 18 ಬೇಡಿಕೆ ಈಡೇರದೇ ಇದ್ದಲ್ಲಿ. ಫೆಬ್ರವರಿ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಕಳೆದ ಎರಡೂವರೆ ವರ್ಷಗಳಲ್ಲಿ ಕಾಂಗ್ರೆಸ್​ ಅಹಿಂದ ವರ್ಗಕ್ಕೆ ಏನೆಲ್ಲಾ ಕೊಡುಗೆ ನೀಡಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಲಿ. ಕೊಟ್ಟ ಮಾತಿನಂತೆ ಡಿ.ಕೆ.ಶಿವಕುಮಾರ್​ ಅವರಿಗೆ ಮುಖ್ಯಮಂತ್ರಿ ಸ್ಥಾನ ಕೊಡದೇ ಇದ್ದರೆ ರಾಜ್ಯದಲ್ಲಿ ಕಾಂಗ್ರೆಸ್​ ಸರ್ವನಾಶವಾಗುತ್ತೆ.
- ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ, ನಾರಾಯಣಗುರು ಪೀಠ ಕರದಾಳ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net