ಸಿಎಂ ಕಚೇರಿಯ ನಕಲಿ ಟಿಪ್ಪಣಿ ಸೃಷ್ಟಿ! ಫೇಕ್​ ಸುದ್ದಿ ಹರಡುವ ಕಿಡಿಗೇಡಿಗಳಿಗೆ ಸಿದ್ದರಾಮಯ್ಯ ಖಡಕ್​ ವಾರ್ನಿಂಗ್​

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Published on

ಪ್ರಮುಖ ಮುಖ್ಯಾಂಶಗಳು

  • ಸಿಎಂ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ ಫೇಕ್​ ಸುದ್ದಿ
  • ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಿದವರ ವಿರುದ್ಧ ಸಿಎಂ ಕೆಂಡಾಮಂಡಲ
  • ನಕಲಿ ಸುದ್ದಿ ಶೇರ್ ಮಾಡುವುದೂ ಅಪರಾಧವೇ ಎಂದ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿಗಳ ಕಚೇರಿಯ ನಕಲಿ ಟಿಪ್ಪಣಿಯನ್ನು ಬಳಸಿಕೊಂಡ ಕೆಲ ಕಿಡಿಗೇಡಿಗಳು, ತಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಿದ್ದನ್ನು ಸಿಎಂ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

ಸಿಎಂ ಟ್ವೀಟ್​

"ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ. ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ" ಎಂದರು.
"ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದೆ ಮತ್ತು ಕಾನೂನು ಕ್ರಮ ಕೈಗೊಳ್ಳಲಿದೆ. ಇಂತಹ ನಕಲಿ ಸುದ್ದಿಗಳನ್ನು ನಂಬಿ, ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್/ಎಐ ಯುಗದಲ್ಲಿ ವಾಟ್ಸ್‌ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ" ಎಂದು ಎಚ್ಚರಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net