ಸೂಗೂರು ಭೋಜಲಿಂಗೇಶ್ವರ ದೇವಾಲಯ ಉದ್ಘಾಟನೆ 11ರಂದು ಸಿಎಂ ಸಿದ್ಧರಾಮಯ್ಯ ಆಗಮನ: ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ
,
Published on:
Copied
Follow Us
ಕಲಬುರಗಿ: ಏಪ್ರಿಲ್ 11 ರಂದು ಚಿತ್ತಾಪುರ ತಾಲೂಕಿನ ಎನ್. ಸೂಗೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರಯವ ಶ್ರೀ ಭೋಜಲಿಂಗೇಶ್ವರ ದೇವಾಲಯ ಹಾಗೂ ಬೆಳ್ಳಿ ಲೇಪಿತ ರಥವನ್ನು ಮಾನ್ಯ ಸಿಎಂ ಸಿದ್ದರಾಮಯ್ಯ ನವರು ಉದ್ಘಾಟಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಸೂಗೂರು ಗ್ರಾಮಕ್ಕೆ ತೆರಳಿ ಸಮಾರಂಭ ನಡೆಯುವ ಸ್ಥಳದ ವೀಕ್ಷಣೆ ಮಾಡಿದರು.
ಅಂದಿನ ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರ ಆಸನದ ವ್ಯವಸ್ಥೆ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಆಸನದ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಇತರ ಸೌಲಭ್ಯಗಳನ್ನು ವೀಕ್ಷಿಸಿದರು.
ಗಣ್ಯರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್ ಸೇರಿದಂತೆ ಇತರೆ ವಿಷಯಗಳ ಕುರಿತಂತೆ ಸಚಿವರ ಅಧಿಕಾರಿಗಳೊಂದಿಗೆ ಚರ್ಚಿಸಿ ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಅಗತ್ಯ ಹಾಗೂ ಕಟ್ಟುನಿಟ್ಟಿನ ಕ್ರಮವಹಿಸುವಂತೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಎಸ್ ಪಿ ಅಡ್ಡೂರು ಶ್ರೀನಿವಾಸಲು, ಸಿಇಒ ಭಂವರ್ ಸಿಂಗ್ ಮೀನಾ , ಡಿವೈಎಸ್ಪಿ ಶಂಕರಗೌಡ ಪಾಟೀಲ್ ಸೇರಿದಂತೆ ಇತರೆ ಅಧಿಕಾರಿಗಳಿದ್ದರು.