ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು ಎಂದರು. ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದು ಕಾಲಘಟ್ಟ ಬೇರೆ ಬೇರೆ. 1972ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಆಗಿದ್ದೇನೆ ಎಂದರು.