2025-26ರ ಅಂತ್ಯದವರೆಗೆ ಕರ್ನಾಟಕಕ್ಕೆ ಕೊಡಬೇಕಾದ ಪಾಲಿನಲ್ಲಿ ರೂ.13,004.63 ಕೋಟಿ ಹಣವನ್ನು ಇನ್ನೂ ಬಿಡುಗಡೆ ಮಾಡಿಲ್ಲ. 2024-25ರ ಹಣಕಾಸು ವರ್ಷದಲ್ಲಿ ಹಂಚಿಕೆಯಾಗಬೇಕಿದ್ದ 3,804.41 ಕೋಟಿ ರೂ. ಪೈಕಿ ಕೇವಲ 570.66 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರವು ಸ್ವೀಕರಿಸಲಾಗಿದ್ದರೂ ರಾಜ್ಯ ಸರ್ಕಾರ ತಾನೇ ಮುಂಗಡವಾಗಿ ರೂ.7,045.64 ಕೋಟಿ ಬಿಡುಗಡೆ ಮಾಡುವ ಮೂಲಕ, ಯೋಜನೆಯ ಯಶಸ್ಸಿಗೆ ಅಗತ್ಯ 7,602.99 ಕೋಟಿ ರೂ. ಮೊತ್ತವನ್ನು ಒದಗಿಸಲಾಗಿದೆ.