ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಸನ್ಮಾನ್ಯ ಎಚ್.ಡಿ.ದೇವೇಗೌಡರು ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ಜೆಡಿ(ಎಸ್) ಪಕ್ಷದಲ್ಲಿ ಬೆಳೆಸಿದ್ದಾರೆ ಎಂದು ವಿನಯಪೂರ್ವಕವಾಗಿ ಕೇಳಬಯಸುವೆ. ಹಾಸನದ ಪುಟ್ಟಸ್ವಾಮಿಗೌಡ, ಸಿ.ಎಸ್.ಪುಟ್ಟೇಗೌಡ, ಜವರೇಗೌಡ, ಕೆ.ಎಂ.ವಿಶ್ವನಾಥ್, ಹನುಮೇಗೌಡ, ಮಂಡ್ಯದ ಕೆ.ಎನ್.ನಾಗೇಗೌಡ, ಕೆ.ಆರ್.ಪೇಟೆ ಕೃಷ್ಣ, ವೈ.ಕೆ.ರಾಮಯ್ಯ, ಸಿ.ಬೈರೇಗೌಡ, ಬಚ್ಚೇಗೌಡ, ಬಿ.ಎಲ್.ಶಂಕರ್, ಸಿ.ನಾರಾಯಣಸ್ವಾಮಿ, ಚೆಲುವರಾಯ ಸ್ವಾಮಿ ಮೊದಲಾದವರೆಲ್ಲ ಯಾಕೆ ದೇವೇಗೌಡರನ್ನು ಬಿಟ್ಟು ಹೊರಬಂದರು ಎನ್ನುವುದನ್ನು ನಾನು ವಿವರಿಸಿ ಹೇಳಬೇಕಾಗಿಲ್ಲ.