ಡಿಜಿಪಿ ರಾಮಚಂದ್ರ ರಾವ್ ಪ್ರಕರಣಕ್ಕೆ ತಕ್ಷಣವೇ ಶಿಸ್ತಿನ ಕ್ರಮ ಜರುಗಿಸುತ್ತೇವೆ, ಕಾನೂನಿಗಿಂತ ಯಾರೂ ದೊಡ್ಡವರಲ್ಲ: ಸಿಎಂ ಸಿದ್ದರಾಮಯ್ಯ...k ramachandra rao

k ramachandra rao
k ramachandra rao
Published on
ಬೆಂಗಳೂರು:  ಸಮವಸ್ತ್ರ ತೊಟ್ಟು ಕಚೇರಿಯಲ್ಲಿ ಕಾರ್ಯನಿರತರಾಗಿದ್ದ ವೇಳೆ ಮಹಿಳೆಯರೊಂದಿಗೆ ರಾಸಲೀಲೆ ನಡೆಸಿದ ಆರೋಪ ಎದುರಿಸುತ್ತಿರುವ ಡಿಜಿಪಿ  ಕೆ. ರಾಮಚಂದ್ರ ರಾವ್ ( k ramachandra rao) ಈ  ಸುದ್ದಿ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಪ್ರಕರಣ ಕುರಿತಾಗಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
 ಬೆಳಗಾವಿಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಕರಣದ ಬಗ್ಗೆ ಖಾಸಗಿವಾಹಿನಿ ಜೊತೆ ಮಾತನಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 'ಡಿಜಿಪಿ ರಾಮಚಂದ್ರ ರಾವ್ ಪ್ರಕರಣದ ಮಾಹಿತಿ ಬೆಳಗ್ಗೆಯೇ ನನ್ನ ಗಮನಕ್ಕೆ ಬಂದಿದೆ. ಈ ನಾಡಿನಲ್ಲಿ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ತಪ್ಪು ಮಾಡಿದ್ದರೆ ಯಾರನ್ನೇ ಆದರೂ ಬಿಡುವ ಪ್ರಶ್ನೆಯೇ ಇಲ್ಲ, ತಕ್ಷಣವೇ ಶಿಸ್ತಿನ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. 

ನಡೆದಿದ್ದೇನು?:

ವೈರಲ್ ಆಗಿರುವ ವಿಡಿಯೋಗಳಲ್ಲಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಕುಳಿತು, ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯೊಬ್ಬರೊಂದಿಗೆ  ಸರಸವಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋಗಳನ್ನು ಒಂದೆರಡು ವರ್ಷಗಳ ಹಿದೆ ರೆಕಾರ್ಡ್​ ಮಾಡಿರಬಹುದೆಂದು ಹೇಳಲಾಗಿದೆ. ಆದರೆ  ವಿಡಿಯೋದಲ್ಲಿರುವ ಮಹಿಳೆ ಯಾರು? ಓರ್ವ ಮಹಿಳೆಯಾ?  ಅಥವಾ ಹಲವು ಮಹಿಳೆಯರಾ ಎಂಬುದು ಗೊತ್ತಾಗಿಲ್ಲ. ಈ ವಿಡಿಯೋಗಳನ್ನು ಯಾರು ಚಿತ್ರೀಕರಿಸಿದ್ದಾರೆ? ಇದರ ಉದ್ದೇಶ ಏನು? ಈಗ ಈ ವಿಡಿಯೋಗಳನ್ನು ಬಹಿರಂಗ ಪಡಿಸಿದ್ಯಾಕೆ ಎಂಬುದು ನಿಗೂಢವಾಗಿದೆ.  
ಸಮವಸ್ತ್ರದ ಘನತೆ ಮರೆತು, ಕಚೇರಿಯಲ್ಲೇ ಇಂತಹ ಕೃತ್ಯವೆಸಗಿರುವುದು ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತ ರಾಜ್ಯ ಸರ್ಕಾರವು ತಕ್ಷಣವೇ ತನಿಖೆಗೆ ಸೂಚಿಸಿದೆ. ಗೃಹ ಇಲಾಖೆಯು ಈ ಬಗ್ಗೆ ವರದಿ ಕೇಳಿದೆ.
ಖಾಸಗಿವಾಹಿನಿ ಜೊತೆ ಮಾತನಾಡಿದ ಕೆ ರಾಮಚಂದ್ರ ರಾವ್​​,  ನಾನು ಕೂಡ ಇಂದು ಆ ವಿಡಿಯೋವನ್ನು ನೋಡಿದ್ದೇನೆ. ಅದು ಸಂಪೂರ್ಣವಾಗಿ ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಿದ ಅಥವಾ ಎಡಿಟ್ ಮಾಡಿರುವ  ವಿಡಿಯೋ ಆಗಿದೆ. ಅಲ್ಲಿರುವ ಮಹಿಳೆಯರು ಯಾರು? ಎಂದು ನನಗೆ ಗೊತ್ತಿಲ್ಲ. ನನ್ನ ವೃತ್ತಿಜೀವನಕ್ಕೆ ಕಪ್ಪುಚುಕ್ಕೆ ಹಚ್ಚಲು.. ಯಾರೋ ವಿರೋಧಿಗಳು ಈ ರೀತಿಯ ಷಡ್ಯಂತ್ರ ರೂಪಿಸಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಯಾರು ಈ ಕೆ. ರಾಮಚಂದ್ರ ರಾವ್?

ಕೆ. ರಾಮಚಂದ್ರ ರಾವ್ ಅವರು ಕರ್ನಾಟಕ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದು, ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಇವರು ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮದಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ (MD) ಸೇವೆ ಸಲ್ಲಿಸಿದ್ದರು. 2023ರಲ್ಲಿ ಇವರಿಗೆ ಡಿಜಿಪಿ (DGP) ಶ್ರೇಣಿಗೆ ಬಡ್ತಿ ನೀಡಲಾಯಿತು. ಆ ಸಮಯದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಎಂಡಿಯಾಗಿ ಕಾರ್ಯನಿರ್ವಹಿಸಿದ್ದರು. ತದನಂತರ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿಯಾಗಿ ನೇಮಕಗೊಂಡಿದ್ದರು.
2025ರ ಮಾರ್ಚ್ ತಿಂಗಳಲ್ಲಿ ಇವರ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿತ್ತು. ಇವರ ಮಲಮಗಳು ರನ್ಯಾ ರಾವ್ ಅವರು ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ರಾಮಚಂದ್ರ ರಾವ್ ಅವರು ತಮ್ಮ ಅಧಿಕಾರ ಮತ್ತು ಪೊಲೀಸ್ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ದೂರು ದಾಖಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ, ತನಿಖೆಯ ದೃಷ್ಟಿಯಿಂದ 2025ರ ಮಾರ್ಚ್‌ನಲ್ಲಿ ಇವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ ಆದೇಶ ಹೊರಡಿಸಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net