ನಿಜಲಿಂಗಪ್ಪನವರು ಒಬ್ಬ ದಕ್ಷ ,ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ತಿಳಿಸಿದರು. ನಿಜಲಿಂಗಪ್ಪನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹಾಗೂ ಅವಿಭಜಿತ ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷರಾಗಿದ್ದರು. ಪ್ರಧಾನಿ ಇಂದಿರಾ ಗಾಂಧಿ ಯವರೊಂದಿಗೆ ರಾಜಕೀಯ ಭಿನ್ನಾಭಿಪ್ರಾಯ ಬೆಳೆದು ಬೇರೆ ಬೇರೆ ಪಕ್ಷ ರಚಿಸಿದ್ದರು ಎಂದರು.