ಕಾಮಗಾರಿ ನಿರ್ವಹಿಸಿದ್ದ ಬಾಕಿ ಬಿಲ್‌ಗಳಿಗೆ ಹಣ ಬಿಡುಗಡೆಗೆ ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕ ಪರ್ಸೆಂಟೇಜ್ ನೀಡಬೇಕಿದೆ. ಸರ್ಕಾರದ ಹಲವು ಇಲಾಖೆಗಳಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. 3 ವರ್ಷದಿಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, 37,370.76 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಗುತ್ತಿಗೆದಾರರ ಕಷ್ಟಗಳನ್ನು ಸರ್ಕಾರ ಕೇಳಿಸಿಕೊಳ್ಳುತ್ತಿಲ್ಲ. ಲೋಕೋಪಯೋಗಿ ಇಲಾಖೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ), ಕರ್ನಾಟಕ ಹೌಸಿಂಗ್ ಬೋರ್ಡ್ (ಕೆಎಚ್‌ಬಿ ) ಹಾಗೂ ಸ್ಲಂಬೋರ್ಡ್ ವ್ಯಾಪ್ತಿಯ ಗುತ್ತಿಗೆದಾರರು ಪ್ರತಿಭಟನೆಗೆ ಆಗಮಿಸಲಿದ್ದಾರೆ.