ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಕಲಬುರಗಿ ಡಿಸಿ ಕಚೇರಿಯಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಮಾತನಾಡಿದರು. ಅಡ್ಡೂರು ಶ್ರೀನಿವಾಸಲು, ರಾಯಪ್ಪ ಹುಣಸಗಿ, ಶಾಲೂ ಇತರರಿದ್ದರು.
ಕಲಬುರಗಿ: ವೈದ್ಯಕಿಯ ಕೋರ್ಸ್ ಪ್ರವೇಶಕ್ಕೆ ನೀಟ್ ಮರು ಪರೀಕ್ಷೆ ಜೂನ್ 21ರಂದು ನಡೆಯಲಿದ್ದು, ಯಾವುದೇ ಹಂತದಲ್ಲೂ ಲೋಪವಾಗದಂತೆ, ಸುಸೂತ್ರ ಹಾಗೂ ಕಟ್ಟುನಿಟ್ಟಾಗಿ ನಡೆಸುವಂತೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳು ಮತ್ತು ಪರೀಕ್ಷೆ ಕೇಂದ್ರದ ಮುಖ್ಯಸ್ಥರೊಂದಿಗೆ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಗರದಾದ್ಯಂತ ಸುಮಾರು 20 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದ್ದು, ಸುಮಾರು 9 ಸಾವಿರಕ್ಕೂ ಹೆಚ್ಚಿನ ಅಭ್ಯರ್ಥಿಗಳು ಪರೀೆ ಬರೆಯಲು ಹೆಸರು ನೋಂದಾಯಿಸಿದ್ದಾರೆ ಎಂದರು.
ಪರೀೆಗೆ ಮುನ್ನವೆ ನಿಗದಿತ ಪರೀಕ್ಷೆ ಕೇಂದ್ರಕ್ಕೆ ಭೇಟಿ ನೀಡಿ, ಅಭ್ಯರ್ಥಿ ಬರೆಯಲು ಅನುಕೂಲವಾಗುವಂತೆ ಆಸನ ವ್ಯವಸ್ಥೆ, ವಿದ್ಯುತ್, ಕುಡಿಯುವ ನೀರು ಸೇರಿ ಅಗತ್ಯ ಮೂಲಸೌಲಭ್ಯ ಖಾತ್ರಿಪಡಿಸಿಕೊಳ್ಳಬೇಕು ಎಂದರು.
ಪರೀಕ್ಷೆ ಹಿನ್ನೆಲೆಯಲ್ಲಿ ಕೇಂದ್ರದ ಸುತ್ತ 200 ಮೀಟರ್ ಪ್ರದೇಶ ನಿಷೇದಾೆ ಇರಲಿದ್ದು, ಎಲ್ಲಿಯೂ ಅಕ್ರಮಕ್ಕೆ ಅವಕಾಶವಿಲ್ಲ. ಪೊಲೀಸ್ ಇಲಾಖೆ ಕೇಂದ್ರಗಳ ಸುತ್ತ ಹೆಚ್ಚಿನ ಭದ್ರತೆ ಒದಗಿಸಬೇಕು. ವಿದ್ಯಾರ್ಥಿಗಳು ಮೊಬೈಲ್ ಸೇರಿ ಯಾವುದೇ ಎಲೆಕ್ಟ್ರಾನಿಕ್ ಉಪಕರಣ ಪರೀಕ್ಷೆ ಕೇಂದ್ರಕ್ಕೆ ತರುವಂತಿಲ್ಲ ಎಂದು ಸ್ಪಷ್ಟಪಡಿಸಿದರು.
ಎಸ್ಪಿ ಅಡ್ಡೂರು ಶ್ರೀನಿವಾಸುಲು, ಡಿಸಿಪಿ ಶಾಲೂ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಪ್ರೊಬೇಷನರ್ ಐ.ಎ.ಎಸ್. ಅಧಿಕಾರಿ ಶಿಖರ್ ಮೋಘಾ, ಪರೀೆಯ ನಗರ ಸಂಯೋಜಕ, ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಭೂಪೇಂದ್ರ, ವಿ.ಟಿ.ಯು ಪ್ರಾಧ್ಯಾಪಕ ಶಂಭುಲಿಂಗ ಸೇರಿ ಇತರರಿದ್ದರು.