ಬಂಗಾರಪೇಟೆಯಲ್ಲಿ ಓಸಾಟ್ ಸಂಸ್ಥೆಯಿಂದ ನಿರ್ಮಿಸುತ್ತಿರುವ ನೂತನ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ College ಭೂಮಿಪೂಜೆ ನೆರವೇರಿಸಿದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಪಿಯು ಕಾಲೇಜು ಆವರಣದಲ್ಲಿ 10 ಕೊಠಡಿಯುಳ್ಳ ಕಟ್ಟಡಕ್ಕೆ ಎಸ್.ಎನ್.ನಾರಾಯಣ ಸ್ವಾಮಿ ಭೂಮಿಪೂಜೆ
ಬಂಗಾರಪೇಟೆ: ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ College ಓಸಾಟ್ ಸಂಸ್ಥೆಯಿಂದ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ಪಿಯು ಕಾಲೇಜು ಆವರಣದಲ್ಲಿ ಭಾನುವಾರ ನೂತನ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಓಸಾಟ್ ಸಂಸ್ಥೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿರುವುದು ಶ್ಲಾಘನೀಯ. ತಾಲೂಕಿನಲ್ಲಿ ಹುಟ್ಟಿ ಬೆಳೆದು ಅಮೆರಿಕಾದಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ರವೀಂದ್ರಕುಮಾರ್ ಹುಟ್ಟಿದ ಊರಿಗೆ ಮತ್ತು ಮಕ್ಕಳಿಗೆ ಸಹಾಯ ಮಾಡುವ ಉದ್ದೇಶದಿಂದ ಓಸಾಟ್ ಮೂಲಕ 2 ಕೋಟಿ ರೂ. ವೆಚ್ಚದಲ್ಲಿ 10 ಕೊಠಡಿ ನಿರ್ಮಿಸಿ ಕೊಡುತ್ತಿದ್ದಾರೆ. ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆಯುವ ಲಕ್ಷಾಂತರ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುವ ಮೂಲಕ ಅವರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದರು.
ಆಧುಕತೆ ಬೆಳೆದಂತೆ ಸ್ಮಾರ್ಟ್ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಅದರಂತೆ ತಾಲೂಕಿನಲ್ಲೂ 4 ತಿಂಗಳೊಳಗೆ ದಾನಿಗಳ ನೆರವಿನಿಂದ ಸ್ಮಾರ್ಟ್ ಕ್ಲಾಸ್ ನಿರ್ಮಿಸಲಾಗುವುದು. ಕೇಸರನಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ 10 ಎಕರೆಯಲ್ಲಿ ಮಾದರಿ ಶಾಲೆ ನಿರ್ಮಿಸಲಾಗುತ್ತದೆ ಎಂದು ತಿಳಿಸಿದರು.
ಸಂಸ್ಥೆಯ ಬಾಲಕೃಷ್ಣರಾವ್ ಮಾತನಾಡಿ, ಅನಿವಾಸಿ ಭಾರತೀಯರು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸುತ್ತಿರುವುದು ಮಕ್ಕಳಲ್ಲಿ ಕಲಿಕಾ ಗುಣಮಟ್ಟ ಹೆಚ್ಚಿಸಲು ಸಹಕಾರಿಯಾಗಿದೆ. ಸಂಸ್ಥೆಯ ಮೂಲಕ ಈಗಾಗಲೇ 117 ಶಾಲೆಗಳನ್ನು ನಿರ್ಮಿಸಲಾಗಿದ್ದು, ಇದು 137ನೇ ಶಾಲೆಯಾಗಿದೆ. ಮಕ್ಕಳ ಸಂಖ್ಯೆ ಹೆಚ್ಚಿರುವ ಕಾಮಸಮುದ್ರ ಮತ್ತು ಬಂಗಾರಪೇಟೆ ಸರ್ಕಾರಿ ಶಾಲೆಗಳಲ್ಲಿ 10 ಕೊಠಡಿ ಮತ್ತು ಶೌಚಗೃಹ ನಿರ್ಮಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಒತ್ತು ನೀಡಲಾಗುವುದು ಎಂದರು.
ಸಂಸ್ಥೆಯ ಬಾಲಕೃಷ್ಣರಾವ್, ಸದಸ್ಯರಾದ ನಾಗಭೂಷಣ, ನಾಗೇಶ್, ಮದನ್, ಶಿಕ್ಷಣ ಇಲಾಖೆಯ ಅಧಿಕಾರಿ ಪರ್ವೀನ್ ತಾಜ್, ಬಿಇಒ ಶಶಿಕಲಾ, ಪ್ರಾಂಶುಪಾಲ ನಾಗಾನಂದ ಕೆಂಪರಾಜ, ಉಪ ಪ್ರಾಂಶುಪಾಲ ಶಂಕರಪ್ಪ ಇದ್ದರು.