ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ವಿವಿಧ ಪಂಚಾಯಿತಿ ನೌಕರರ ಸಾಂಕೇತಿಕ ಪ್ರತಿಭಟನೆ.
Published on:
Copied
Follow Us
ಸುಂಟಿಕೊಪ್ಪ: ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿ ಮಾಡಲು ಒತ್ತಾಯಿಸಿ ಜು.9 ರಂದು ಬೆಂಗಳೂರು ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಹೇಳಿದ್ದಾರೆ.
ಶುಕ್ರವಾರ ಬೆಳಗ್ಗೆ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ವಿವಿಧ ಪಂಚಾಯಿತಿ ನೌಕರರ ಸಾಂಕೇತಿಕ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿ, ನಮ್ಮ ಬೇಡಿಕೆಯನ್ನು ಮನ್ನಿಸಿ ರಾಜ್ಯ ಸರ್ಕಾರ 2026ರ ಮೇ 22ರ ಅಧಿಸೂಚನೆಯಂತೆ 21,600 ರೂ. ಕನಿಷ್ಠ ವೇತನ ನಿಗದಿಗೊಳಿಸಿ ಆದೇಶ ಮಾಡಲಾಗಿದೆ. ಆದರೆ, ಬೆಲೆ ಏರಿಕೆ ಮತ್ತು ಇತರ ಕಾರಣಗಳಿಂದ ನಮ್ಮ ಬೇಡಿಕೆ 36,000 ರೂ. ಆಗಿತ್ತು. ಆದರೆ ಮೇ 22ರ ಅಧಿಸೂಚನೆಯನ್ನು ಸರ್ಕಾರ ಜಾರಿಗೆ ತಂದಿಲ್ಲ. ಇದರ ಜತೆಗೆ 13 ಬೇಡಿಕೆ ಈಡೇರಿಸಲು ಆಗ್ರಹಿಸಿ ಜು.9ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಭರತ್ ಹೇಳಿದ್ದಾರೆ.
ವಿಶ್ವ ರಂಗಸ್ವಾಮಿ, ಗಾಯತ್ರಿ,ಮಣಿಕಂಠ, ಮುನಿಸ್ವಾಮಿ, ರಾಮಚಂದ್ರ, ವಿಶ್ವ, ರವಿ, ರಾಜ, ಮುರುಗೇಶ್, ರಮೇಶ, ಸಣ್ಣ, ಚಂದ್ರ ಮಣಿ, ಕೊಡಗರಹಳ್ಳಿಯ ನೀರು ಗಂಟಿ ಮಂಜ ಸೇರಿದಂತೆ ಸುತ್ತ ಮುತ್ತಲಿನ ಪಂಚಾಯಿತಿಗಳ ನೌಕರರು ಪಾಲ್ಗೊಂಡಿದ್ದರು.