ಮೇಲ್ಮನವಿದಾರರು ಮಾಹಿತಿ ಕೋರಿ ಸಲ್ಲಿಸಿದ ಅರ್ಜಿಗೆ ಸಕಾಲದಲ್ಲಿ ಮಾಹಿತಿ ನೀಡಿದೆ ಇರುವುದರಿಂದ ಅರ್ಜಿದಾರರು ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠದಲ್ಲಿ ಸಲ್ಲಿಸಿದ ದ್ವೀತಿಯ ಮೇಲ್ಮವಿ ವಿಚಾರಣೆ ನಡೆಸಿದಾಗ ಮೇಲ್ಮನವಿದಾರರಿಗೆ ಮಾಹಿತಿ ನೀಡುವಂತೆ ಪ್ರತಿವಾದಿಗಳಾದ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯತ ಕಾರ್ಯದರ್ಶಗಳಿಗೆ ಪೀಠ ಮಾಹಿತಿ ಹಕ್ಕು ಅಧಿನಿಯಮ 2005 ಕಲಂ 18(3) ಎ,ಡಿ ರಡಿ ನಿರ್ದೇಶನ ನೀಡಿ, ತಪ್ಪಿದಲ್ಲಿ ಮಾಹಿತಿ ಹಕ್ಕು ಅಧಿನಿಯಮ 2005ರ ಕಲಂ 20(1) ರಡಿ ದಂಡದ ಎಚ್ಚರಿಕೆ ನೀಡಿದರೂ ಪೀಠದ ಆದೇಶ ಪಾಲನೆ ಮಾಡದ ಕಾರಣ ಪ್ರತಿವಾದಿ ಅಧಿಕಾರಿಗಳಾದ ವಡಗೇರಾ ತಾಲ್ಲೂಕಿನ ತಡಬಿಡಿ ಗ್ರಾಮ ಪಂಚಾಯತ ಕಾರ್ಯದರ್ಶಿ ಯಂಕನಗೌಡ, ಗುಂಡಗುರ್ತಿ ಗ್ರಾಮ ಪಂಚಾಯತ ಕಾರ್ಯದರ್ಶಿ ಮಲ್ಲಿಕಾರ್ಜುನ ನಾಯಕ್, ಯಾದಗಿರಿ ತಾಲ್ಲೂಕಿನ ಸೈದಾಪೂರ ಗ್ರಾಮ ಪಂಚಾಯತ ಕಾರ್ಯದರ್ಶಿ, ಇಸ್ಮಾಯಿಲ್, ಇವರಿಗೆ ಹಾಗೂ ವಿಜನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ತಾಡರು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಶಿವಕುಮಾರ್ ದೊಡ್ಡಮನಿ ಅವರಿಗೆ ತಲಾ 10,000/- ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಮಾಡಲಾಗಿದೆ.