ಮಲೇರಿಯಾ ನಿರ್ಮೂಲನೆಗೆ ಸಂಕಲ್ಪ ಮಾಡಿ

 ಸಿಂಧನೂರಿನ ತಹಸಿಲ್ ಕಚೇರಿಯಲ್ಲಿ ಶುಕ್ರವಾರ ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿ ಸಭೆ ನಡೆಯಿತು. ತಹಸೀಲ್ದಾರ್ ಅರುಣ್ ದೇಸಾಯಿ, ತಾಪಂ ಇಒ ಚಂದ್ರಶೇಖರ, ನಗರಸಭೆ ಪೌರಾಯುಕ್ತ ಪಾಂಡುರಂಗ ಇಟಗಿ, ತಾಲೂಕು ಆರೋಗ್ಯಾಧಿಕಾರಿ ಅಯ್ಯನಗೌಡ, ನಗರ ಅರೋಗ್ಯ ಕೇಂದ್ರದ ಡಾ.ಮೇರಿ ಭಂಡಾರಿ, ಡಾ.ಶ್ರುತಿ ಆರ್. ಇತರರಿದ್ದರು.
ಸಿಂಧನೂರಿನ ತಹಸಿಲ್ ಕಚೇರಿಯಲ್ಲಿ ಶುಕ್ರವಾರ ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿ ಸಭೆ ನಡೆಯಿತು. ತಹಸೀಲ್ದಾರ್ ಅರುಣ್ ದೇಸಾಯಿ, ತಾಪಂ ಇಒ ಚಂದ್ರಶೇಖರ, ನಗರಸಭೆ ಪೌರಾಯುಕ್ತ ಪಾಂಡುರಂಗ ಇಟಗಿ, ತಾಲೂಕು ಆರೋಗ್ಯಾಧಿಕಾರಿ ಅಯ್ಯನಗೌಡ, ನಗರ ಅರೋಗ್ಯ ಕೇಂದ್ರದ ಡಾ.ಮೇರಿ ಭಂಡಾರಿ, ಡಾ.ಶ್ರುತಿ ಆರ್. ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತಹಸೀಲ್ದಾರ್ ಅರುಣ್ ದೇಸಾಯಿ ಸೂಚನೆ
ಸಿಂಧನೂರುಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸಕ್ರಿಯವಾಗಿ ಪಾಲ್ಗೊಂಡು ಯಶಗೊಳಿಸಬೇಕೆಂದು ತಹಸೀಲ್ದಾರ್ ಅರುಣ್ ದೇಸಾಯಿ ತಿಳಿಸಿದರು.
ತಹಸಿಲ್ ಕಚೇರಿಯಲ್ಲಿ ಜಿಪಂ, ಜಿಲ್ಲಾ ಆರೋಗ್ಯ ಇಲಾಖೆ, ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಇಲಾಖೆ, ಟಿಎಚ್‌ಒ ಕಚೇರಿಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದರು.
 ಜೂ.28ರಿಂದ ಜು.1ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿ, ಶೇ. 100 ಪ್ರಗತಿ ಸಾಧಿಸಬೇಕೆಂದು ಸೂಚಿಸಿದರು. ಮಲೇರಿಯಾ ರೋಗ ನಿರ್ಮೂಲನೆಗೆ ಸಂಕಲ್ಪ ಮಾಡೋಣ.
 ಮಾನ್ಸೂನ್ ಅವಧಿಯಲ್ಲಿ ಈಡೀಸ್ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು, ಶಾಲಾ-ಕಾಲೇಜು ಆವರಣಗಳಲ್ಲಿ ಲಾರ್ವಾ ಸಮೀಕ್ಷೆ ನಡೆಸುವುದು, ಪ್ರತಿ ಶನಿವಾರ ಪ್ರೌಢಶಾಲೆ ವಿದ್ಯಾರ್ಥಿಗಳ ಮೂಲಕ ಜಾಗೃತಿ ಜಾಥಾ ಹಮ್ಮಿಕೊಳ್ಳಬೇಕು ಎಂದರು.
ತಾಪಂ ಇಒ ಚಂದ್ರಶೇಖರ, ನಗರಸಭೆ ಪೌರಾಯುಕ್ತ ಪಾಂಡುರಂಗ ಇಟಗಿ, ಟಿಎಚ್‌ಒ ಅಯ್ಯನಗೌಡ, ನಗರ ಅರೋಗ್ಯ ಕೇಂದ್ರದ ಡಾ.ಮೇರಿ ಭಂಡಾರಿ, ಡಾ.ಶ್ರುತಿ ಆರ್., ಸಿಬ್ಬಂದಿ ರಂಗನಾಥ ಈ., ಸಂಗನಗೌಡ ಮಾಲಿಪಾಟೀಲ್, ವಿಬಿಡಿ ಮೇಲ್ವಿಚಾರಕ ಎಫ್.ಎ.ಹಣಗಿ, ತಾಲೂಕು ಬಿಪಿಎಂ ತ್ರಿವೇಣಿ ಭಂಡಾರಿ, ಭದ್ರೇಶ, ಸೋಮಲಿಂಗಪ್ಪ, ಡಾ.ಲಕ್ಷ್ಮೀ, ವಿಜಯಲಕ್ಷ್ಮೀ, ಮಲ್ಲಿಕಾ, ಮೇಲ್ವಿಚಾರಕ ರಾಘವೇಂದ್ರ, ಕಿಶನರಾವ್, ಬಾಲಪ್ಪ ನಾಯಕ, ಮಲ್ಲಪ್ಪ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net