ಪ್ರತಿ ಗ್ರಾಮಕ್ಕೂ ಮೂಲ ಸೌಲಭ್ಯ ಕಲ್ಪಿಸಲು ಬದ್ಧ

ಬೇಲೂರು ತಾಲೂಕಿನ ಅನುಘಟ್ಟ ಗ್ರಾಪಂ ವ್ಯಾಪ್ತಿಯ ಲಕ್ಷ್ಮೀಪುರ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಭೂಮಿಪೂಜೆ ನೆರವೇರಿಸಿದರು. ವಿಕ್ರಂ ಕೌರಿ, ರೇಖಾ ಬಸವರಾಜು, ಲಕ್ಷ್ಮೀಶ, ವಸಂತ ಕುಮಾರ್, ಬಸವರಾಜು ಇತರರಿದ್ದರು.
ಬೇಲೂರು ತಾಲೂಕಿನ ಅನುಘಟ್ಟ ಗ್ರಾಪಂ ವ್ಯಾಪ್ತಿಯ ಲಕ್ಷ್ಮೀಪುರ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಭೂಮಿಪೂಜೆ ನೆರವೇರಿಸಿದರು. ವಿಕ್ರಂ ಕೌರಿ, ರೇಖಾ ಬಸವರಾಜು, ಲಕ್ಷ್ಮೀಶ, ವಸಂತ ಕುಮಾರ್, ಬಸವರಾಜು ಇತರರಿದ್ದರು.
Published on
ಬೇಲೂರು: ತಾಲೂಕಿನ ಅನುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಕ್ಷ್ಮೀಪುರ ಗ್ರಾಮದ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಯಗಚಿ ನೀರಾವರಿ ಯೋಜನಾ ವಿಭಾಗದಿಂದ ಕಾಂಕ್ರೀಟ್ ರಸ್ತೆ ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ತಾಲೂಕಿನ ಅನುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಕ್ಷ್ಮೀಪುರ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮಸ್ಥರ ಸಮ್ಮುಖದಲ್ಲಿ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಈ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಂತೆ ಕಾಂಕ್ರೀಟ್ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಪ್ರತಿಯೊಂದು ಗ್ರಾಮಕ್ಕೂ ಮೂಲ ಸೌಲಭ್ಯ ಒದಗಿಸಿ ಕೊಡುವುದು ನಮ್ಮ ಕರ್ತವ್ಯ. ಅದರಂತೆ ಈ ಗ್ರಾಮಕ್ಕೂ ಕೆಲಸ ಮಾಡಿಸಲಾಗುತ್ತಿದೆ. ಜತೆಗೆ ಗ್ರಾಮಸ್ಥರು ಗ್ರಾಮಕ್ಕೆ ಸಮುದಾಯ ಭವನ, ದೇವಸ್ಥಾನ ಅಭಿವೃದ್ಧಿಗೆ ಮನವಿ ಮಾಡಿದ್ದಾರೆ. ಮುಂದಿನ ಕೆಲವೇ ದಿನಗಳಲ್ಲಿ ಗ್ರಾಮಸ್ಥರ ಬೇಡಿಕೆಗಳನ್ನು ಈಡೇರಿಸಲಾಗುವುದು. ಈ ಭಾಗದಲ್ಲಿ ಮಳೆ ಹೆಚ್ಚು ಬರುವುದರಿಂದ ಮಳೆಗಾಲಕ್ಕೆ ಮುಂಚೆ ಕೆಲಸ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು. ಮತ್ತು ಕಾಡಾನೆಗಳು ಆಗಾಗ ಈ ಗ್ರಾಮದ ಮೂಲಕ ಇತರ ಗ್ರಾಮಗಳಿಗೆ ತೆರಳುವುದರಿಂದ ವಿದ್ಯುತ್ ಕಡಿತವಾಗದಂತೆ ಎಚ್ಚರ ವಹಿಸಲು, ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಗಳ ಓಡಾಟದ ಬಗ್ಗೆ ಗ್ರಾಮಸ್ಥರಿಗೆ ಸರಿಯಾದ ಮಾಹಿತಿ ನೀಡುವಂತೆ ತಿಳಿಸಲಾಗಿದೆ ಎಂದರು.
ಬಿಜೆಪಿ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಕ್ರಂ ಕೌರಿ, ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ರೇಖಾ ಬಸವರಾಜು, ಲಕ್ಷ್ಮ್ಮೀಪುರ ಗ್ರಾಮಸ್ಥರಾದ ಲಕ್ಷ್ಮೀಶ, ವಸಂತ ಕುಮಾರ್, ಬಸವರಾಜು, ಅನುಘಟ್ಟ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಸತೀಶ್, ಪಿಡಿಒ ಬಾಬು, ಕಾರ್ಯದರ್ಶಿ ದೇವರಾಜು ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net