* ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಮುಖ್ಯ ಆಡಳಿತಾಕಾರಿ ಉಷಾರಾಣಿ ಅಧ್ಯಕ್ಷತೆಯಲ್ಲಿ ಸಮಿತಿ
ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಗಳ ತನಿಖೆ ನಡೆಸಲು ರಾಜ್ಯ ಸರ್ಕಾರ ತನಿಖಾ ಸಮಿತಿ ರಚಿಸಿ ಆದೇಶ ಹೊರಡಿಸಿದೆ.
ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಮುಖ್ಯ ಆಡಳಿತಾಕಾರಿ ಉಷಾರಾಣಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಜಿಒಟಿ ಮುಖ್ಯ ಲೆಕ್ಕಪತ್ರಾಕಾರಿ ಡಾ. ವಿಷ್ಣುಪ್ರಸಾದ್ ಹಾಗೂ ನೆಫ್ರೋ ಯುರಾಲಜಿ ಸಂಸ್ಥೆ ಆಡಳಿತಾಕಾರಿ ಮಂಜುಳಾ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಿಸಿದೆ. ಇವರಿಗೆ ಸಂಸ್ಥೆಯಲ್ಲಿನ ಅಕ್ರಮಗಳ ಕುರಿತು ವಿಚಾರಣೆ ಹಾಗೂ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಆದೇಶದಲ್ಲಿ ಸೂಚಿಸಿದೆ.
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಆಡಳಿತಾತ್ಮಕ, ಆರ್ಥಿಕ, ಟೆಂಡರ್ ಹಾಗೂ ಖರೀದಿ ಪ್ರಕ್ರಿಯೆಗಳಲ್ಲಿ ಅಕ್ರಮಗಳು ನಡೆಯುತ್ತಿದೆ ಎಂದು ಸಂಸ್ಥೆಯ ಮುಖ್ಯ ಆಡಳಿತಾಕಾರಿ ಆಶಾ ಪರ್ವೀನ್ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರ ಸಮಿತಿಗೆ ಆದೇಶಿಸಿದೆ.