

ಸಾದಲಿ:
ಚಿಂತಾಮಣಿ ಮತ್ತು ಬಾಗೇಪಲ್ಲಿ ರಸ್ತೆಗಳು ಸಂಧಿಸುವ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ವೃತ್ತದಲ್ಲಿ ಬಸ್ ನಿಲ್ದಾಣ, ಸೌಕರ್ಯಗಳಿಲ್ಲದೆ ಪ್ರಯಾಣಿಕರು ರಸ್ತೆಯಲ್ಲೇ ಪರದಾಡುವಂತಾಗಿದೆ.
ಶಾಸಕರ ಸೂಚನೆಗೂ ಬೆಲೆ ಇಲ್ಲ
ಶಾಸಕ ಬಿ.ಎನ್.ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ, ವಾಹನ ಸವಾರರಿಗೆ ಆಗುತ್ತಿರುವ ತೊಂದರೆ ಗಮನಿಸಿ ರಸ್ತೆ ವಿಸ್ತರಣೆ ಹಾಗೂ ನಿಲ್ದಾಣ ನಿಮಾರ್ಣಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದರೂ ಈವರೆಗೆ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ.
ಈ ವೃತ್ತದಲ್ಲಿ ಬಸ್ ನಿಲ್ದಾಣಕ್ಕಾಗಿ ಹತ್ತಾರು ವರ್ಷಗಳಿಂದ ಬೇಡಿಕೆ ಇಟ್ಟಿದ್ದೇವೆ. ಮಳೆ ಬಂದರೆ ನಿಲ್ಲಲು ಸೂರಿಲ್ಲ, ಬಿಸಿಲಿದ್ದರೆ ನೆರಳಿಲ್ಲ. ಜನರು ಪ್ರತಿನಿತ್ಯ ಸಂಕಷ್ಟ್ಟ ಅನುಭವಿಸುತ್ತಿದ್ದಾರೆ. ಅಧಿಕಾರಿಗಳು ಕೂಡಲೇ ಎಚ್ಚೆತ್ತು ನಿಲ್ದಾಣ ನಿರ್ಮಿಸಬೇಕು.
— ಶ್ರೀನಿವಾಸ್ ದಿಬ್ಬೂರಹಳ್ಳಿ