2007ರಲ್ಲಿ ಎಕರೆಗೆ 15 ರಿಂದ 25 ಲಕ್ಷ ರೂ. ಪರಿಹಾರ ನಿಗದಿಪಡಿಸಲಾಗಿತ್ತು. ಅಭಿವೃದ್ಧಿಪಡಿಸಿದ ಜಾಗದಲ್ಲಿ 50:50 ಅನುಪಾತದಲ್ಲಿ ನಿವೇಶನ ನೀಡುವುದಾಗಿ ಕೋರ್ಟ್ನಲ್ಲಿ ಭರವಸೆ ನೀಡಿ ರೈತರಿಂದ ಕೇಸ್ ವಾಪಸ್ ಪಡೆಸಲಾಗಿತ್ತು. ಆದರೆ, ಈಗ ನಿವೇಶನ ಲಭ್ಯವಿಲ್ಲ ಎಂದು ಅಧಿಕಾರಿಗಳು ಹಿಂಬರಹ ನೀಡುತ್ತಿದ್ದಾರೆ. ವರ್ಷಕ್ಕೆರಡು ಬಾರಿ ಪರಿಹಾರ ಪಡೆದುಕೊಳ್ಳಿ ಎಂದು ನೋಟಿಸ್ ನೀಡುವ ಅಧಿಕಾರಿಗಳು, ಅಲ್ಲಿಗೆ ಹೋದರೆ ಹಾಸನ, ಮೈಸೂರು ಎಂದು ಅಲೆದಾಡಿಸುತ್ತಿದ್ದಾರೆ. ಪರಿಹಾರ ಕೇವಲ ಪೇಪರ್ ಮೇಲೆ ಉಳಿದಿದ್ದು, ಅಧಿಕಾರಿಗಳು ರೇವಣ್ಣ ಅವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.