ಈ ಕುರಿತು ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿ.ಕೆ. ಶಿವಕುಮಾರ್,ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್,ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್,ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಎಂ.ಮಹೇಶ್ವರರಾವ್ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತ ಮೇಜರ್ ಮಣ್ಣಿವಣ್ಣನ್ ಅವರಿಗೆ ಮಾಹಿತಿ ಹಕ್ಕು ಅಧ್ಯಯನ ಕೇಂದ್ರ ಅಧ್ಯಕ್ಷ ಬಿ.ಎಚ್. ವೀರೇಶ್ ದೂರು ಕೊಟ್ಟಿದ್ದಾರೆ. ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕುಗಳು (ಟಿಡಿಆರ್) ಮತ್ತು ಪ್ರೀಮಿಯಂ ಎಫ್‌ಎಆರ್ ನೀತಿಗಳ ಕುರಿತು ಉಂಟಾಗಿರುವ ಗೊಂದಲವನ್ನು ಸಮಗ್ರವಾಗಿ ಪರಿಶೀಲಿಸಿ ಬಗೆಹರಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.