ಗುಣಮಟ್ಟದದೊಂದಿಗೆ ಸೇತುವೆ ಕಾಮಗಾರಿ ಮುಗಿಸಿ

ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿ ಕುರಿತು ಇಂಜಿನಿಯರ್ ಅವರೊಂದಿಗೆ ಶಾಸಕ ಡಾ.ಮಂತರ್ ಗೌಡ ಚರ್ಚಿಸಿದರು.
ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿ ಕುರಿತು ಇಂಜಿನಿಯರ್ ಅವರೊಂದಿಗೆ ಶಾಸಕ ಡಾ.ಮಂತರ್ ಗೌಡ ಚರ್ಚಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಐಗೂರು ಗ್ರಾಮ
  • ಸೇತುವೆ ಕಾಮಗಾರಿ
ಸೋಮವಾರಪೇಟೆ: ತಾಲ್ಲೂಕಿನ ಐಗೂರು ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿಯನ್ನು ಶಾಸಕ ಡಾ.ಮಂತರ್ ಗೌಡ ಈಚೆಗೆ ಪರಿಶೀಲಿಸಿದರು.
ಮಡಿಕೇರಿಯಿಂದ ಹಾಸನಕ್ಕೆ ತೆರಳುವ ರಾಜ್ಯ ಹೆದ್ದಾರಿಯಾಗಿರುವುದರಿಂದ ಕಾಮಗಾರಿ ಪೂರ್ಣಗೊಳ್ಳದ ಕಾರಣ ಸಾಕಷ್ಟು ಸಮಸ್ಯೆಯಾಗಿದೆ. ಕೂಡಲೇ ಕಾಮಗಾರಿ ಮುಗಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಸ್ಥಳೀಯರು ಶಾಸಕರಲ್ಲಿ ಮನವಿ ಮಾಡಿದರು.
ಗುಣಮಟ್ಟದ ಕಾಮಗಾರಿಯೊಂದಿಗೆ ಆದಷ್ಟು ಬೇಗ ಸೇತುವೆ ಕಾಮಗಾರಿ ಮುಗಿಸುವಂತೆ ಇಂಜಿನಿಯರ್ ವಿಜಯಕುಮಾರ್ ಅವರಿಗೆ ಶಾಸಕ ಮಂತರ್ ಗೌಡ ಸೂಚಿಸಿದರಲ್ಲದೆ, ಪಾದಾಚಾರಿಗಳ ಮಾರ್ಗದಲ್ಲಿ ಸುರಕ್ಷಾ ಕ್ರಮವನ್ನು ತೆಗೆದುಕೊಳ್ಳಬೇಕು ಎಂದರು.
ಈ ಹಿಂದೆ ಇದ್ದ ಕಬ್ಬಿಣ ಸೇತುವೆ ನೆನಪಿನಲ್ಲಿ ಮತ್ತು ಅದರ ಇತಿಹಾಸವನ್ನು ಪರಿಚಯಿಸುವ ವೀಕ್ಷಣಾ ಮಾದರಿಯನ್ನು ನಿರ್ಮಿಸುವ ಮೂಲಕ ಸೇತುವೆಯ ನೆನಪು ಜನರಲ್ಲಿ ಉಳಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net