ಯಾದಗಿರಿ: ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸಿ ಸಾರ್ವಜನಿಕರ ಉಪಯೋಗಕ್ಕೆ ವ್ಯವಸ್ಥೆ ಮಾಡಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು.
ನಗರದ ವಾರ್ಡ್ 30ರ ಹೊಸ ಬಸ್ ನಿಲ್ದಾದ ಎದುರಿಗಿನ ಅನ್ಸಾರ್ ಹೋಟೆಲ್ದಿಂದ ಕೆಇಬಿ ಬಾಬಾ ಮನೆಯವರೆಗೆ 60 ಲ ರೂ. ಅನುದಾನದಲ್ಲಿ ಕೈಗೊಳ್ಳುತ್ತಿರುವ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣದ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.
ಗುಣಮಟ್ಟದಲ್ಲಿ ಕೆಲಸ ಮಾಡಬೇಕೆಂದ ಅವರು, ನಗರದ ವಿವಿಧ ವಾರ್ಡ್ಗಳಲ್ಲಿನ ರಸ್ತೆ ಮತ್ತು ಚರಂಡಿ ನಿರ್ಮಾಣದ ಕಾರ್ಯ ಮುಂದಿನ ದಿನಗಳಲ್ಲಿ ಕೈಗೊಳ್ಳಲಾಗುವುದು. ನಿರ್ಮಿತಿ ಕೇಂದ್ರದಿಂದ ಈ ಕಾಮಗಾರಿ ನಡೆಯುತ್ತಿದ್ದು, ಕೆಲಸ ಮುಗಿಯುವವರೆಗೂ ಜನರ ಸಂಚಾರ ತೊಂದರೆಯಾಗುತ್ತದೆ. ಆದರೂ ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.