ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ

ಮುಧೋಳದಲ್ಲಿ ಶಾಸಕ ಆರ್.ಬಿ. ತಿಮ್ಮಾಪೂರ ಅಧಿಕಾರಿಗಳು ಹಾಗೂ ಸಾರ್ವಜನಿಕರೊಂದಿಗೆ ಸಭೆ ನಡೆಸಿ ಅಭಿವದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. ಸದುಗೌಡ ಪಾಟೀಲ, ಅಶೋಕ ಕಿವಡಿ, ರಾಘು ಮೌಕಾಶಿ, ಡಾ. ಸತೀಶ ಮಲಘಾಣ, ಗೋಪಾಲ ಕಾಸೆ ಸೇರಿ ಇತರರು ಉಪಸ್ಥಿತರಿದ್ದರು.
ಮುಧೋಳದಲ್ಲಿ ಶಾಸಕ ಆರ್.ಬಿ. ತಿಮ್ಮಾಪೂರ ಅಧಿಕಾರಿಗಳು ಹಾಗೂ ಸಾರ್ವಜನಿಕರೊಂದಿಗೆ ಸಭೆ ನಡೆಸಿ ಅಭಿವದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. ಸದುಗೌಡ ಪಾಟೀಲ, ಅಶೋಕ ಕಿವಡಿ, ರಾಘು ಮೌಕಾಶಿ, ಡಾ. ಸತೀಶ ಮಲಘಾಣ, ಗೋಪಾಲ ಕಾಸೆ ಸೇರಿ ಇತರರು ಉಪಸ್ಥಿತರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಆರ್.ಬಿ. ತಿಮ್ಮಾಪೂರ ಸೂಚನೆ
  • ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ
ಮುಧೋಳ: ಸಾರ್ವಜನಿಕರ ದೈನಂದಿನ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಯಾವುದೇ ನಿರ್ಲಕ್ಷೃ ವಹಿಸದೆ ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಶಾಸಕ ಆರ್.ಬಿ. ತಿಮ್ಮಾಪೂರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರಸಭೆ ಸಭಾಂಗಣ ಹಾಗೂ ತಹಸೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಗಳಲ್ಲಿ ಅಧಿಕಾರಿಗಳು ಮತ್ತು ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಅವರು, ನಗರದ ಸಮಗ್ರ ಅಭಿವದ್ಧಿಗೆ ಸರ್ಕಾರ ಬದ್ಧವಾಗಿದ್ದು, ಅಧಿಕಾರಿಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸುವುದು ಅಗತ್ಯವೆಂದು ಹೇಳಿದರು.
ನಗರದಲ್ಲಿ ನಡೆಯುತ್ತಿರುವ ವಿವಿಧ ಅಭಿವದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಶಾಸಕರು, ಕಾಮಗಾರಿಗಳ ವಿಳಂಬಕ್ಕೆ ಅವಕಾಶ ನೀಡಬಾರದು. ನನೆಗುದಿಗೆ ಬಿದ್ದಿರುವ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಗುಣಮಟ್ಟದ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ತಾಕೀತು ಮಾಡಿದರು. ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದನೆ ನೀಡುವಲ್ಲಿ ಅಧಿಕಾರಿಗಳು ಹೆಚ್ಚಿನ ಹೊಣೆಗಾರಿಕೆ ತಾಳಬೇಕು. ಕಚೇರಿಗೆ ಬರುವ ಜನರ ಸಮಸ್ಯೆಗಳನ್ನು ಆಲಿಸಿ ತಕ್ಷಣ ಪರಿಹಾರ ಕಲ್ಪಿಸುವ ಮೂಲಕ ಜನಪರ ಆಡಳಿತ ನೀಡಬೇಕು ಎಂದು ಸೂಚಿಸಿದರು.
ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಹಾಗೂ ಮೂಲಸೌಕರ್ಯ ಕಾಮಗಾರಿಗಳ ಕುರಿತು ಸಮಗ್ರ ಚರ್ಚೆ ನಡೆಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ವಕೀಲ ಅಶೋಕ ಕಿವಡಿ, ಮುಖಂಡ ರಾಘು ಮೌಕಾಶಿ, ನಗರಸಭೆ ಮಾಜಿ ಸದಸ್ಯ ಡಾ. ಸತೀಶ ಮಲಘಾಣ, ಪೌರಾಯುಕ್ತ ಗೋಪಾಲ ಕಾಸೆ, ತಹಸೀಲ್ದಾರ್ ಚಿಕ್ಕಪ್ಪ ನಾಯಕ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net