ದೇವಲಗಾಣಗಾಪುರ ದತ್ತಾತ್ರೇಯ ದೇವಸ್ಥಾನ ಅಭಿವೃದ್ಧಿ ಕುರಿತು ಸೋಮವಾರ ಕಲಬುರಗಿ ಡಿಸಿ ಕಚೇರಿಯಲ್ಲಿ ಉಸ್ತುವಾರಿ ಸಚಿವ ಪ್ರಿಯಾಂಕ್ ರ್ಖಗೆ ಅದ್ಯಕ್ಷತೆಯಲ್ಲಿ ಸಭೆ ನಡೆಯಿತು. ಶಾಸಕ ಎಂ.ವೈ.ಪಾಟೀಲ್, ಕೆಕೆಆರ್ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್, ಡಿಸಿ ಇಕ್ರಮ್ ಶರ್ೀ, ಎಡಿಸಿ ರಾಯಪ್ಪ ಹುಣುಸಗಿ ಇದ್ದರು.
ಅಫಜಲಪುರ: ದೇವಲಗಾಣಗಾಪುರಕ್ಕೆ ಬರುವ ಭಕ್ತರಿಗೆ ಅನುಕೂಲವಾಗುವಂತೆ ದೇವಸ್ಥಾನ, ಸಂಗಮ ಕ್ಷೇತ್ರ ಹಾಗೂ ಅಷ್ಟತಿರ್ಥಗಳಲ್ಲಿ ಘಾಟ್ ನಿರ್ಮಾಣ ಜತೆ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯ ಸಭೆಯಲ್ಲಿ ಚರ್ಚೆ ನಡೆಯಿತು.
ಡಿಸಿ ಕಚೇರಿಯಲ್ಲಿ ಸೋಮವಾರ ಕರೆದಿದ್ದ ಸಭೆಯಲ್ಲಿ ಶಾಸಕ ಎಂ.ವೈ. ಪಾಟೀಲ್ ಮಾತನಾಡಿ, ದೇವಸ್ಥಾನದ ಅಭಿವೃದ್ಧಿಗೆ ಈಗಾಗಲೇ ಶೂನ್ಯ ಆರ್ಕಿಟೆಕ್ಟ್ ಆ್ಯಂಡ್ ಡೆವಲಪರ್ಸ್ನಿಂದ ಡಿಪಿಆರ್ ಸಿದ್ಧಪಡಿಸಲಾಗಿದೆ. ಕ್ಷೇತ್ರಕ್ಕೆ ಹೆಚ್ಚಿನ ಯಾತ್ರಿಕರು ಬರುತ್ತಿರುವುದರಿಂದ ಮೂಲಸೌಕರ್ಯಗಳ ಅಭಿವೃದ್ಧಿ ಕಾರ್ಯ ಶೀಘ್ರ ಕೈಗೊಳ್ಳಬೇಕು. ಇದರಿಂದಾಗಿ ಪ್ರವಾಸಿಗರ ಆಕರ್ಷಣೆ ಕೇಂದ್ರ ಜತೆ ಸ್ಥಳಿಯ ಉದ್ಯೋಗ ಸೃಷ್ಟಿಯಿಂದ ಆರ್ಥಿಕತೆಗೂ ಸಹಕಾರಿಯಾಗಲಿದೆ ಎಂದು ಗಮನಸೆಳೆದರು.
ಡಿಪಿಆರ್ ಸಿದ್ಧಪಡಿಸಿ ವರದಿ ಸಲ್ಲಿಸಿ. ಸಿಎಂ ಜತೆ ಸಮಾಲೋಚನೆ ನಡೆಸಿ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಸಚಿವ ಪ್ರಿಯಾಂಕ್ ಭರವಸೆ ನೀಡಿದರು.
ಕೆಕೆಆರ್ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್, ಡಿಸಿ ಇಕ್ರಮ್ ಶರೀಫ್, ಜಿಪಂ ಸಿಇಒ ರಾಹುಲ್ ಸಂಕನೂರ, ಎಸ್ಪಿ ಅಡ್ಡೂರು ಶ್ರೀನಿವಾಸಲು, ತಹಸೀಲ್ದಾರ್ ಸಂಜೀವಕುಮಾರ ದಾಸರ, ಪಿಡಬ್ಲುಡಿ ಎಇಇ ಲಕ್ಷಿ$್ಮಕಾಂತ ಬಿರಾದಾರ, ದೇವಸ್ಥಾನದ ಇಒ ಶಿವಕಾಂತಮ್ಮ ಇದ್ದರು.
"
ಅಭಿವೃದ್ಧಿ ಕಾರ್ಯದ ಸಂದರ್ಭದಲ್ಲಿ ದೇವಸ್ಥಾನದ ಪಾವಿತ್ರ್ಯ ಮತ್ತು ಪರಂಪರೆಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ನೋಡಿಕೊಳ್ಳಲಾಗುವುದು. ದೇವಳದ ವೈಭವ ಉಳಿಸಿ ಭಕ್ತಾದಿಗಳ ಅನುಕೂಲಕ್ಕಾಗಿ ಸಮಗ್ರ ಪ್ರಗತಿಗೆ ಕ್ರಮ ವಹಿಸಲಾಗುತ್ತದೆ.